ತುಮಕೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿ ಮೆಯಂದು ನಂಜನಗೂಡಿನ ಶ್ರೀ ಶ್ರೀ ಕಂಠೇಶ್ವರ ಸ್ವಾ ಮಿ ದೇವಾಲಯದಲ್ಲಿ ರೂಢಿ ಸಂಪ್ರ ದಾಯದಂತೆ ಅಂಧಕಾಸುರನ ಸಂಹಾರ ಧಾರ್ಮಿಕ ಕಾರ್ಯಕ್ರ ಮವನ್ನು ನೆರೆವೇರಿಸುವ ಸಂದರ್ಭದಲ್ಲಿ ಕೆಲವು ದುಷ್ಕ ರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದು, ತಪ್ಪಿತಸ್ಥ ರ ವಿರುದ್ಧ ಕಠಿಣ ಕಾನೂನು ಕ್ರ ಮ ಜರುಗಿಸಬೇಕು, ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳು ವಂತೆ ಆಗ್ರಹಿಸಿ 2 ಜನವರಿ 2024 ರ ಮಂಗಳವಾರದಂದು ಕರ್ನಾಟಕ ದೇವಸ್ಥಾನ – ಮಠ ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಮಾನ್ಯ ಗೃಹ ಸಚಿವರಿಗೆ ಕುಣಿಗಲ್ ಗ್ರೇಡ್ 2 ತಹಶೀಲ್ದಾ ರ್ ರವರ ಮೂಲಕ ಮನವಿ ನೀಡಲಾಯಿತು, ಈ ಸಂದರ್ಭದಲ್ಲಿ ಮಹಾಸಂಘದ ವತಿಯಿಂದ ಕುಣಿಗಲ್ ನ ಗ್ರಾಮದೇವತೆ ದೇವಸ್ಥಾನದ ಅರ್ಚಕರಾದ ಶ್ರೀ ಕುಮಾರ್ ಹಾಗೂ ಶನೇಶ್ವ ರ ದೇವಸ್ಥಾನದ ಅರ್ಚಕರಾದ ಶ್ರೀ ಕಾರ್ತಿಕ್, ಹಿಂದೂ ಜನಜಾಗೃತಿ ಸಮಿತಿಯ ಶ್ರೀ ಅರುಣ್ ಗೌಡ ಹಾಗೂ ಧರ್ಮಪ್ರೇಮಿಗಳಾದ ಶ್ರೀ ಮಂಜುನಾಥ ಇವರು ಉಪಸ್ಥಿ ತರಿದ್ದರು.
ಈ ಉತ್ಸ ವ ಪ್ರತೀವರ್ಷ ಅನಾದಿಕಾಲದಿಂದ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಕೆಲವು ದುಷ್ಕರ್ಮಿಗಳು ಪೂರ್ವನಿಯೋಜಿತ ಷಡ್ಯಂತ್ರ್ಯ ವನ್ನು ಮಾಡಿ, ಸದರಿ ಉತ್ಸ ವದಲ್ಲಿ ದೊಂಬಿ, ಗಲಾಟೆ ಮಾಡಿ, ಶ್ರೀ ನಂಜುಂಡೇಶ್ವರ ದೇವರಿಗೆ ಧಿಕ್ಕಾ ರ ಕೂಗಿ, ಉತ್ಸ ವ ಆಚರಣೆಗೆ ಭಂಗ ತರುವ ಮೂಲಕ ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿ, ಉತ್ಸ ವ ಮೂರ್ತಿಯನ್ನು ಅಪವಿತ್ರ ಮಾಡಿದ್ದಾರೆ. ಸದರಿ ಘಟನೆಯು ಅತ್ಯಂತ ಗಂಭೀರವಾಗಿದ್ದು, ರಾಜ್ಯ ದ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗೆ ಘಾಸಿಯುಂಟು ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ಘಟನೆಯನ್ನು ಖಂಡಿಸಿ, ಭಕ್ತರು ಮತ್ತು ಸ್ಥಳಿಯರು ಸ್ವಯಂಪ್ರೇರಿತರಾಗಿ ಶಾಂತಿಯುತ ಪ್ರ ತಿಭಟನೆಯನ್ನು ಮಾಡಿದ್ದಾರೆ. ಆದರೆ ಪೊಲೀಸರು ಅಪರಾಧಿಗಳನ್ನು ಬಂಧನ ಮಾಡುವ ಬದಲು ಶಾಂತಿಯುತ ಪ್ರ ತಿಭಟನೆ ಮಾಡಿದ ಭಕ್ತರ ಮೇಲೆ ದೂರು ದಾಖಲು ಮಾಡಿರುವುದು ಖಂಡನೀಯ.
ಈ ಘಟನೆಯ ನಂತರ ಅನೇಕ ಹಿಂದೂ ವಿರೋಧಿಗಳು ಶ್ರೀ ಶ್ರೀ ಕಂಠೇಶ್ವರ ದೇವರ ಬಗ್ಗೆ ಅತ್ಯಂತ ಕೆಟ್ಟದಾಗಿ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಾಕಿ ಅಪಮಾನ ಮಾಡಿದ್ದಾರೆ. ನಾಗೇಶ್ ಬಿಎಮ್ ಎನ್ನುವವರು ತಮ್ಮ ಪೇಸ್ ಬುಕ್ ಖಾತೆಯಲ್ಲಿ “ಕಬಿನಿ ನದಿಯಲ್ಲಿ ಜಳಕವಾಡುವ 90% ಅಧಿಕ ಹೆಚ್ಚು ಜನ ಉಚ್ಚೆ ಉಯ್ಯು ತ್ತಾರೆ. ನದಿಯುದ್ದಕ್ಕೂ ವಾಸವಿರುವ ಜನ ತಿಕ ತೊಯ್ಯುತ್ತಾರೆ ಧನ ಮತ್ತು ಬಟ್ಟೆ ತೊಳೆಯುತ್ತಾರೆ, ಅದೇ ನೀರನ್ನು ದಿನನಿತ್ಯ ಅರ್ಚಕರು ತಂದು ನಂಜುಂಡನಿಗೆ ಅಭಿಷೇಕ ಮಾಡುತ್ತಾರೆ. ನೀರನ್ನು ಎರಚಿದರು ಸಹ ನಂಜುಂಡನಿಗೇಕೆ ಮೈಲಿಗೆಯಾಗುತ್ತದೆ ?” ಎಂದು ಕೆಟ್ಟದಾಗಿ ಭಕ್ತರ ಭಾವನೆಗೆ ಘಾಸಿಯಾಗುವ ರೀತಿಯಲ್ಲಿ, ಶ್ರೀ ನಂಜುಂಡೇಶ್ವರ ದೇವರಿಗೆ ಅಪಮಾನವಾಗುವ ರೀತಿಯಲ್ಲಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. ಇವರ ಮೇಲೂ ಸಹ ಕಾನೂನು ಕ್ರ ಮ ಜರುಗಿಸಬೇಕು, ರಾಜ್ಯ ಸರಕಾರ ಕೂಡಲೇ ಎಚ್ಚೆತ್ತು ಈ ರೀತಿ ಉತ್ಸ ವಕ್ಕೆ ಅಡ್ಡಿ ಪಡಿಸಿದ ಅಪರಾಧಿಗಳನ್ನು ಕೂಡಲೇ ಬಂಧನ ಮಾಡಿ ಅವರಿಗೆ ತಕ್ಕ ಶಾಸ್ತಿಯನ್ನು ನೀಡಬೇಕು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಜರುಗಿಸಬೇಕು` ಎಂದು ಮನವಿಯ ಮೂಲಕ ಆಗ್ರಹಿಸಿದ್ದಾರೆ.