ತುಮಕೂರು ಜಿಲ್ಲೆಯಾದ್ಯಂತ ಲೋಕಸಭೆ ಚುನಾವಣೆಯ ಹವಾ ಹೆಚ್ಚಾಗಿ ಕಾಣಿಸುತ್ತಿದ್ದು, ನಾನು ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಯನ್ನು ಮಾಡಿದ್ದು ನನ್ನ ಶ್ರಮಕ್ಕೆ ಈಗ ಇದರ ಪ್ರತಿಫಲವಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕೇಳುತ್ತಿದ್ದೇನೆ ಎಂದು ಮಾಜಿ ಕೌಶಲ್ಯಾಭಿವೃದ್ಧಿ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.
ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದಲ್ಲಿನ ದೇವಾಲಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾನುವಾರ ಪಾಲ್ಗೊಂಡು ಮಾಧ್ಯಮದೊಂದಿಗೆ ಮಾತನಾಡಿದರು.
ತುಮಕೂರು ಲೋಕಸಭೆಯ ಉಸ್ತುವಾರಿ ವಹಿಸಿಕೊಂಡಿರುವಂತಹ ಕೃಷ್ಣ ಬೈರೇಗೌಡ,ಎಐಸಿಸಿ ಸಮೀಕ್ಷೆ ಮತ್ತು ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಗಳ ಎಲ್ಲರ ವರದಿಗಳು ನನ್ನ ಪರವಾಗಿಯೇ ಇದ್ದು ಪಕ್ಷ ನನಗೆ ಲೋಕಸಭೆ ಟಿಕೆಟ್ ನೀಡಬೇಕು ಎಂದು ತುಮಕೂರು ಲೋಕಸಭಾ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಮುರುಳೀಧರ ಹಾಲಪ್ಪ ಪ್ರತಿಕ್ರಿಯೆ ನೀಡಿದರು.
ಜಿಲ್ಲೆಯಲ್ಲಿ ತೆಂಗು ಪಾರ್ಕ್ ಮತ್ತು ಹುಣಸೆ ಪಾರ್ಕ್ ನಿರ್ಮಾಣವಾಗಬೇಕಿದ್ದು ನಾನು ಜಿಲ್ಲೆಯಾದ್ಯಂತ ರೈತರೊಂದಿಗೆ ನಾವು ಕಾರ್ಯಕ್ರಮದ ಆಯೋಜನೆ ಸಂದರ್ಭದಲ್ಲಿ ಸ್ಥಳೀಯ ಸಮಸ್ಯೆ ಮತ್ತು ಜ್ವಲಂತ ಸಮಸ್ಯೆಗಳ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿಯನ್ನು ಪಡೆದಿದ್ದೇನೆ, ನನ್ನ ಬೆಂಬಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಇದ್ದು.
ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡುವ ಭರವಸೆ ಇದೆ ಎಂದು ಹೇಳಿದರು. ಇತ್ತೀಚೆಗೆ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ಮಾನ್ಯಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದು.
ಕಾಂಗ್ರೆಸ್ ಪಕ್ಷದ ಟಿಕೆಟ್ ಯಾರಿಗೆ ಸಿಗಲಿದೆ ಎಂದು ಕಾದು ನೋಡಬೇಕಿದೆ