ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಕಾರ್ಮಿಕ ಅಧಿಕಾರಿ ನಮಗೆ ಬೇಡ : ಕಾರ್ಮಿಕ ಮುಖಂಡ ಗಿರೀಶ್

ದೇಶದ ಯಾವುದೇ ರಾಜ್ಯಗಳು ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಯಾವುದೇ ಕಾರಣಕ್ಕೂ ಅನ್ಯ ಯೋಜನೆಗಳಿಗೆ ಬಳಸದೆ ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ಮಾತ್ರ ಬಳಸಬೇಕು ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಗ್ರಹಿಸಿದರು.

 

ಅವರು ಫೆಬ್ರವರಿ 28 ಕಟ್ಟಡ ಕಾರ್ಮಿಕರ ಬೇಡಿಕೆ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕಟ್ಟಡ ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ 1996ರಲ್ಲಿ ಜಾರಿಗೆ ಬಂದ ಕಾಯ್ದೆಯನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಮತ್ತು ಈ ಕಾಯ್ದೆ ಕಾರ್ಮಿಕರ ವಿರುದ್ದವಾಗಿ ತಿದ್ದಪಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು. ಕಟ್ಟಡ ಕಾರ್ಮಿಕರಿಗಾಗಿ ಮೀಸಲಿಟ್ಟಿರುವ ಹಣವನ್ನು ಸುಪ್ರೀಂಕೋರ್ಟ್ ನಿರ್ದೇಶನದಂತೆ ಅನ್ಯ ಯೋಜನೆಗಳಿಗೆ ಬಳಸಬಾರದು 1996ರ ಮೂಲ ಸೆಸ್ ಕಾಯ್ದೆ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಇರುವ 1 ಪರ್ಸೆಟ್ ಸಸೆನ್ನು 2 ಪರ್ಸೆಟ್‌ಗೆ ಹೆಚ್ಚಳ ಮಾಡಬೇಕು ಹೆಚ್ಚಳ ಮಾಡಿದ ಸೆಸ್ ಹಣವನ್ನು ಕಾರ್ಮಿಕರ ಯೋಗಕ್ಷೇಮಕ್ಕೆ ಹೆಚ್ಚು ಗಣನೀಯವಾಗಿ ಆರ್ಥಿಕ ಬೆಂಬಲ ವೃದ್ಧಿಸಲು ಬಳಕೆಯಾಗಬೇಕು ಹಾಗೂ ಖಾಸಗೀ ಸೆಸ್ 10 ಲಕ್ಷ, ವಾಣಿಜ್ಯ ಸೆಸ್ 5 ಲಕ್ಷ ಸೆಸ್ ಸಂಗ್ರಹದ ಮಿತಿಯನ್ನು ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಬಾರದು ಮತ್ತು ಒಳಾಂಗಣ ಅಲಂಕಾರಕ್ಕೂ ಸೆಸ್ ಸಂಗ್ರಹಿಸಬೇಕು ಎಂದು ಆಗ್ರಹಿಸಿದರು ಎಲ್ಲಾ ರಾಜ್ಯಗಳು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾನೂನನ್ನು ಮತ್ತು ಸೌಲಭ್ಯಗಳನ್ನು ಸಮಾನ ರೀತಿಯಲ್ಲಿ ವಿತರಿಸಬೇಕು.

 

ರಾಜ್ಯ ಮಂಡಳಿ ಸದಸ್ಯ ಗೋವಿಂದರಾಜು ಮಾತನಾಡಿ ಈಗ ನಮ್ಮ ರಾಜ್ಯದಲ್ಲಿರುವ ತಿಂಗಳ 3000 ಪಿಂಚಣಿಯನ್ನು ಕನಿಷ್ಠ 6000 ಸಾವಿರಕ್ಕೆ ಹೆಚ್ಚಳ ಮಾಡಬೇಕು. ಕಾರ್ಮಿಕ ಇಲಾಖೆಯ ಆಯುಕ್ತರ ಕಛೇರಿಯಲ್ಲಿ ನಮ್ಮ ಸಂಘಟನೆಯ ಸದಸ್ಯರನ್ನು ಎಲ್ಲಾ ರಾಜ್ಯದಲ್ಲಿ ಮಂಡಳಿ ಸದಸ್ಯರನ್ನಾಗಿ ನೇಮಿಸುವುದು. ಹಾಗೂ ಲಿಂಗ ಅಸಮಾನತೆಯನ್ನು ಹೋಗಲಾಡಿಸಿ ಹೆಣ್ಣು-ಗಂಡು ಎಂಬ ಬೇದ-ಭಾವವಿಲ್ಲದೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದರು ನಿರ್ಮಾಣ ಕಾರ್ಮಿಕರ ಬಾಕಿ ಇರುವ ಸೌಲಭ್ಯಗಳನ್ನು ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಮಂಡಳಿಯ ಅಧಿಕಾರಿಗಳು ಕೂಡಲೇ ವಿಲೇವಾರಿ ಮಾಡಬೇಕು. ಪಾಂಡಿಚೆರಿ ಕೇಂದ್ರಾಡಳಿತ ಪ್ರದೇಶದಲ್ಲಿ ಜಾರಿಯಲ್ಲಿರುವಂತೆ ರಾಷ್ಟಿçÃಯ ಹಬ್ಬದ ದಿನವಾದ ದೀಪಾವಳಿಯ ಉಡುಗೊರೆಯಾಗಿ ಪ್ರತಿ ವರ್ಷ 10000 ಸಾವಿರ ಬೋನಸ್ ನೀಡಬೇಕು ಎಂದು ಆಗ್ರಹಿಸಿದರು.

 

ಸಮಸ್ಯೆ ಇತ್ಯಾರ್ಥ ಪಡಿಸಿ ಎಂದು ಬಂದ ಕಾರ್ಮಿಕರನ್ನು ನಿರ್ಲಕ್ಷಿಸಿದ ಕಾರ್ಮಿಕ ಅಧಿಕಾರಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆಸುತ್ತಿದ್ದ ಕಟ್ಟಡ ಕಾರ್ಮಿಕರ ಹೋರಾಟದ ಸ್ಥಳಕ್ಕೆ ಬಂದಿದ್ದ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ತೇಜಾವತಿ ಕಟ್ಟಡ ಕಾರ್ಮಿಕರ ಕೆಲಸದಲ್ಲಿ ತೊಡಗಿರುವ ಕಟ್ಟಡ ಕಾರ್ಮಿಕರು ಹೊಸ ಕಾರ್ಡ್ಗಳನ್ನು ಮಾಡಿಸಿಕೊಳ್ಳಲು ಸಕಾಲದಲ್ಲಿ ನೋಂದಾಯಿಸಿದ್ದು ಇದು ವಿಲೇವಾರಿಯಾಗದೆ ನೂರಾರು ಕಟ್ಟಡ ಕಾರ್ಮಿಕರ ಕಾರ್ಡ್ಗಳು ರದ್ದುಗೊಂಡಿವೆ ಕಾರ್ಮಿಕರು ಕಾರ್ಡ್ಗಳನ್ನು ನೋಂದಾಯಿಸಿದ ಹಲವು ದಿನಗಳ ನಂತರ ರದ್ದಾಗುತ್ತಿರುವ ವಿಷಯವನ್ನು ಸ್ವತಃ ಕಾರ್ಮಿಕರೇ ತಮ್ಮ ಸಮಸ್ಯೆಯನ್ನು ಬಗೆಹರಿಸಿ ಎಂದು ಕೇಳಲು ಮುಂದಾದಾಗ ನನಗೂ ಅದಕ್ಕೂ ಸಂಬAದವಿಲ್ಲವೆAಬAತೆ ಕಾರ್ಮಿಕರ ಮಾತುಗಳನ್ನು ಕೇಳಿಸಿಕೊಳ್ಳದೆ ಹೋದ ಪ್ರಸಂಗ ನಡೆಯಿತು. ಇದರಿಂದ ಕಾರ್ಮಿಕರು ಕಾರ್ಮಿಕ ಅಧಿಕಾರಿಯ ವರ್ತನೆಯನ್ನು ಖಂಡಿಸಿ ಪ್ರತಿಭಟಿಸಿದರು.

 

 

ಜಿಲ್ಲಾ ಖಜಾಂಚಿ ಅಶ್ವತ್ಥನಾರಾಯಣ ಮಾತನಾಡಿ ಕಟ್ಟಡ ಕಾರ್ಮಿಕರ ಮಂಡಳಿಯನ್ನು ಕಾರ್ಮಿಕ ಕಾನೂನುಗಳು ತಿದ್ದುಪಡಿಯಾಗಿರುವ ೪ ಕೋಡ್‌ಗಳಿಗೆ ವಿಲೀನ ಮಾಡಬಾರದು. ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನ ಸಹಾಯವನ್ನು ಈ ಹಿಂದೆ ಇದ್ದ ಹಾಗೆ ಮುಂದುವರಿಸುವುದು ಮತ್ತು ಕಡಿಮೆ ಮಾಡಿರುವುದನ್ನು ಮತ್ತೆ ವಾಪಸ್ಸ್ ಪಡೆಯಬೇಕು. ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಖಾಸಗಿ ಆಸ್ಪತ್ರೆಗಳ ಆರೋಗ್ಯ ತಪಾಸಣೆಯನ್ನು ತಕ್ಷಣ ನಿಲ್ಲಿಸಬೇಕು. ಸರ್ಕಾರಿ ಆಸ್ಪತ್ರೆಯಿಂದ ಆರೋಗ್ಯ ತಪಾಸಣೆ ನಡೆಸಬೇಕು ಮಂಡಳಿಯ ಹಣದಲ್ಲಿ ಯಾವುದೇ ರೀತಿಯ ಕಿಟ್‌ಗಳನ್ನು ಖರೀದಿಸಬಾರದು ಎಂದರು. ಪ್ರತಿಭಟನೆಯಲ್ಲಿ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಚಂದ್ರಶೇಖರ್, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಮಧುಗಿರಿ ಗೋವಿಂದಪ್ಪ, ಶಿರಾ ತಾಲ್ಲೂಕು ಓಬಳರಂಗಯ್ಯ, ಕುಪ್ಪೂರು ನರಸಿಂಹಯ್ಯ, ಸುರೇನಹಳ್ಳಿ ರಸೂಲ್‌ಸಾಬ್, ಮಂಜುನಾಥ್, ತೋವಿನಕೆರೆ ಯುವ ಮುಖಂಡ ಗೋವಿಂದರಾಜು, ಮುಂತಾದವರು ನೇತರ‍್ವವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!