ತುಮಕೂರು: ಕೃಷಿ ಕ್ಷೇತ್ರವನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬ್ಯಾಟರಂಗೇಗೌಡ ಆರೋಪಿಸಿದರು.
ಅವರು ನಗರದ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಅಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ರಾಜ್ಯದಲ್ಲಿ ಬರ ತಾಂಡವವಾಡುತ್ತಿದ್ದು, ಕೃಷಿಕರು ಕೈಕಟ್ಟಿಕುಳಿತಿದ್ದಾರೆ. ರಾಗಿ ಖರೀದಿ ಕೇಂದ್ರದಲ್ಲಿ ಸರಿಯಾದ ವ್ಯವಸ್ಥೆಯಿಲ್ಲದೆ ಬೆಂಬಲ ಬೆಲೆ ಸರಿಯಾಗಿನಿಗದಿಯಾಗದೇ ರೈತರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಚಟುವಟಿಕೆಗೆ ಸರಿಯಾದ ಗಮನ ಕೊಡದ ರಾಜ್ಯಸರ್ಕಾರ ಕೇವಲ ಕೇಂದ್ರಸರ್ಕಾರವನ್ನು ದೂಷಿಸುತ್ತಾ ಕಾಲಹರಣ ಮಾಡುತ್ತಿದೆ ಎಂದರು.
ರಾಜ್ಯ ಬಿಜೆಪಿ ರೈತ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಮಾತನಾಡಿ, ರೈತರು ಬೆಳೆಯುವ ಬೆಳೆಗೆ ಸೂಕ್ತ ಬೆಂಬಲ ಬೆಲೆ ಇಲ್ಲ, ಜಾನುವಾರುಗಳಿಗೆ ಮೇವು ಇಲ್ಲ, ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ರಾಜ್ಯದಲ್ಲಿ ಎದುರಾಗಿದೆ. ಜನ ಸಮಾನ್ಯರಿಗೆ ಕುಡಿಯಲು ನೀರು ಇಲ್ಲ, ಹೊಸ ಬೋರ್ ಕೊರೆಯಲು ಅವಕಾಶ ಇಲ್ಲ. ಈ ರೀತಿಯಾದ ಸಂಕಷ್ಟದ ಸುಳಿಯಲ್ಲಿ ರಾಜ್ಯ ಸಿಲುಕಿದೆ. ಈ ಸಮಸ್ಯೆಗಳನ್ನು ನಿಭಾಯಿಸುವ ಬದಲು ಮೋದಿವರನ್ನು ಟೀಕಿಸುತ್ತಾ ಕಾಲಹರಣ ಮಾಡುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೋದಿ ನೇತೃತ್ವದಲ್ಲಿ ಕೃಷಿ ಸಮ್ಮಾನ್ ಯೋಜನೆ ಸಂಪೂರ್ಣ ಯಶಸ್ವಿಯಾಗಿದೆ ಅದರೂ ಕಾಂಗ್ರೆಸ್ಸಿಗರು ಕೇಂದ್ರ ಸರ್ಕಾರ ಕೃಷಿಯನ್ನು ನಿರ್ಲಕ್ಷಿಸಿದೆ ಎಂದು ಹೇಳುತ್ತಿದ್ದು, ಈ ಮಾತನ್ನು ಹೇಳಲು ಅವರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.
ದೇಶದ ಕೃಷಿಕರು ಸಾಮಾನ್ಯ ಜನರು ಇವುಗಳೆಲ್ಲವನ್ನುಇ ಗಮನಿಸುತ್ತಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೂಕ್ತ ಪಾಠ ಕಲಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ನಗರ ಶಾಸಕ ಜ್ಯೋತಿಗಣೇಶ್, ಮುಖಂಡರಾದ ಸದಾಶಿವಯ್ಯ,ಸೇರಿದಂತೆ ಹಲವರು ಉಪಸ್ಥಿತರಿದ್ದರು.