ಲೋಕಸಭಾ ಸಾರ್ವತ್ರಿಕ ಚುನಾವಣೆ -2024ರ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಇಂದು ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಸಭೆಯು ಜಿಲ್ಲಾ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಿತು .
ಜಿಲ್ಲೆಯಲ್ಲಿ ಒಟ್ಟು 2618 ಮತಗಟ್ಟೆ ಗಳನ್ನು ಸ್ಥಾಪಿಸಲಾಗಿದ್ದು, ಮತಗಟ್ಟೆ ಪಟ್ಟಿಗಳನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಜಿಲ್ಲಾ ಭೂದಾಖಲೆಗಳ ಉಪ ನಿರ್ದೇಶಕ ನಿರಂಜನ್ ಎಂ.ಎನ್. ಚುನಾವಣಾ ತಹಸೀಲ್ದಾರ್ ರೇಷ್ಮಾ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು