5,8,9 ಹಾಗೂ 11ನೇ ತರಗತಿ ಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೈಕೋರ್ಟ್ ದ್ವಿಸದಸ್ಯಪೀಠ ಗುರುವಾರ ಸಂಜೆ ಆದೇಶ ನೀಡಿದ ಹಿನ್ನೆಲೆಯಲ್ಲಿ ರೂಪ್ಸ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಶಿಕ್ಷಣ ಇಲಾಖೆ5,8,9 ಹಾಗೂ 11ನೇ ತರಗತಿ ಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಆದೇಶ ನೀಡಿದ್ದು ಇದರ ವಿರುದ್ಧ ರೂಪ್ಸ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೈಕೋರ್ಟ್ ಗೆ ಮನವಿ ಸಲ್ಲಿಸಿ ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಆರ್ ಟಿ ಹಾಗೂ ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನಕ್ಕೆ ಈ ಬೋರ್ಡ್ ಪರೀಕ್ಷೆ ವಿರುದ್ಧವಾದುದಾಗಿದ್ದು ಯಾವುದೇ ಕಾರಣಕ್ಕೂ ಪರೀಕ್ಷೆಗಳನ್ನು ನಡೆಸಬಾರದೆಂದು ವಾದ ಮಂಡಿಸಿದರು. ಅದರಂತೆ ಹೈಕೋರ್ಟ್ ಏಕ ಸದಸ್ಯಪೀಠ ಪರೀಕ್ಷೆ ನಡೆಸಬಾರದೆಂದು ಆದೇಶ ಸಹ ನೀಡಿತ್ತು. ಆದರೆ ರಾಜ್ಯ ಸರ್ಕಾರ ಗುರುವಾರ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮನವಿ ಸಲ್ಲಿಸಿದ್ದು, ಪರೀಕ್ಷೆ ನಡೆಸುವಂತೆ ದ್ವಿಸದಸ್ಯ ಪೀಠ ಸರ್ಕಾರಕ್ಕೆ ಆದೇಶ ನೀಡಿತ್ತು.
ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ರೂಪ್ಸ ಕರ್ನಾಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೈಕೋರ್ಟ್ ದ್ವಿಸದಸ್ಯ ಪೀಠದ ತೀರ್ಪು ಹೊರಬಂದ ನಂತರ ಸಂಘಟನೆಯ ಪದಾಧಿಕಾರಿಗಳು, ಶಿಕ್ಷಣತಜ್ಞರು ಹಾಗೂ ಶಿಕ್ಷಕ ಸಮುದಾಯದೊಂದಿಗೆ ಚರ್ಚೆ ನಡೆಸಿ ಅಂತಿಮವಾಗಿ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್’ಗೆ ಮೇಲ್ಮನವಿ ಸಲ್ಲಿಸುವ ತೀರ್ಮಾನಕ್ಕೆ ಬಂದಿದ್ದು, ರಾಜ್ಯ ಸರ್ಕಾರ ನಡೆಸಲು ಹೊರಟಿರುವ ಬೋರ್ಡ್ ಪರೀಕ್ಷೆ ಶಿಕ್ಷಣ ನೀತಿಗೆ ವಿರುದ್ಧವಾದುದಾಗಿದ್ದು, ಕನೂನಿನ ವಿರುದ್ಧ ಹೋಗಲು ನಮ್ಮ ವ್ಯವಸ್ಥೆಯಲ್ಲಿ ಅವಕಾಶವಿಲ್ಲವಾದ್ದರಿಂದ ಅಂತಿಮವಾಗಿ ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತಿರುವುದಾಗಿ ತಿಳಿಸಿದರು.