ಸುಟ್ಟ ರಥವನ್ನು ಮಣ್ಣಿನಲ್ಲಿ ಮುಚ್ಚಿ ಸಂಸ್ಕಾರ ಮಾಡಿದ ಭಕ್ತಾದಿಗಳು

ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ಎನ್ ಪುರ ಗ್ರಾಮದ ಕಲ್ಲೇಶ್ವರ ಸ್ವಾಮಿರಥಕ್ಕೆ ಆಸಾಮಿಯೊಬ್ಬ ಬೆಂಕಿ ಇಟ್ಟು ಸಂಪೂರ್ಣವಾಗಿ ಸುಟ್ಟು ಹೋಗಿತ್ತು ಸುಟ್ಟಿರುವ ರಥವನ್ನು ಹೆಚ್ಚು ದಿನ ನಿಲ್ಲಿಸಬಾರದು ಎಂಬ ಕಾರಣದಿಂದ ಮಂಗಳವಾರ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಸೇರಿಕೊಂಡು ಸುಟ್ಟಿರುವ ರಥಕ್ಕೆ ವಿಶೇಷಪೂಜೆ ಸಲ್ಲಿಸಿ ಹೋಮ ಹವನಗಳನ್ನು ನಡೆಸಿ ತೇವಡಿಹಳ್ಳಿ ಮಠದ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಟ್ಟದಹಳ್ಳಿ ಚಂದ್ರಶೇಖರ ಸ್ವಾಮೀಜಿಗಳ ದಿವ್ಯ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಣ್ಣಿನಲ್ಲಿ ಮುಚ್ಚಿ ಸಂಸ್ಕಾರ ಮಾಡಲಾಯಿತು.

 

 

ಇದೇ ತಿಂಗಳ 20 ರಿಂದ ಪ್ರಾರಂಭಗೊಳ್ಳಲಿರುವ ಕಲ್ಲೇಶ್ವರ ಸ್ವಾಮಿ ಜಾತ್ರೆಯನ್ನು ನಿಲ್ಲಿಸಲು ತೀರ್ಮಾನಿಸಿದ್ದ ಗ್ರಾಮಸ್ಥರು ಧಾರ್ಮಿಕಗುರುಗಳ ಹಾಗೂ ಸ್ವಾಮೀಜಿಗಳ ಸಲಹೆಯಂತೆ ಜಾತ್ರೆಯನ್ನು ಧಾರ್ಮಿಕವಾಗಿ ನೆರವೇರಿಸಲು ಮುಂದಾಗಿದ್ದಾರೆ. ಕಲ್ಲೇಶ್ವರಸ್ವಾಮಿ ರಥ ಇಲ್ಲದೇ ಇರುವುದರಿಂದ ಗ್ರಾಮದಲ್ಲಿರುವ ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯದ ರಥವನ್ನೇ ಬಳಸಿಕೊಂಡು ಈ ಬಾರಿ ಸಂಪ್ರದಾಯ ಬದ್ಧವಾಗಿ ಜಾತ್ರೆಯನ್ನು ನಡೆಸಿವೆವು. ಮುಂದಿನ ವರ್ಷದೊಳಗೆ ಅಗತ್ಯವಿರುವ ಕ್ರಮ ಕೈಗೊಂಡು ನೂತನ ರಥೋತ್ಸವವನ್ನು ಮಾಡಿಸಲೇಬೇಕಿದೆ ಎಂದು ಗ್ರಾಮಸ್ಥರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!