ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಲೋಕೇಶ್ ತಾಳಿಕಟ್ಟೆ

ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಕಣದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ರೂಪ್ಸ ಕರ್ನಾಟಕ ರಾಜ್ಯಾಧ್ಯಕ್ಷ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಸ್ಪಷ್ಟಪಡಿಸಿದರು.

 

 

 

ಅವರು ಕೊರಟಗೆರೆ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಶಿಕ್ಷಣ ವ್ಯವಸ್ಥೆಯಲ್ಲಿನ ಹಲವಾರು ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಪಕ್ಷೇತರರಾಗಿ ಚುನಾವಣಾ ಕಣದಲ್ಲಿದ್ದು ಈಗಾಗಲೇ ಐದು ಜಿಲ್ಲೆಗಳಲ್ಲಿಯೂ ಸಹ ಪ್ರಚಾರ ನಡೆಸಿದ್ದು ಶಿಕ್ಷಕರು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಹಾಗೂ ಶಿಕ್ಷಕರ ಸಂಘಟನೆಗಳು ತಮಗೆ ಬೆಂಬಲ ವ್ಯಕ್ತಪಡಿಸಿದ್ದು ಉತ್ತಮವಾದ ಪ್ರತಿಕ್ರಿಯ ಕ್ಷೇತ್ರದಾದ್ಯಂತ ವ್ಯಕ್ತವಾಗಿದೆ. ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿರುವ ವೈ.ಎ.ನಾರಾಯಣಸ್ವಾಮಿ ಅವರು ಶೈಕ್ಷಣಿಕ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲರಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಕರು ತಮಗೆ ಅಭೂತಪೂರ್ವವಾದ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ‌‌. ಆದ್ದರಿಂದ ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

 

 

ಕೆಲವರು ದುರುದ್ದೇಶಪೂರ್ವಕವಾಗಿ ಲೋಕೇಶ್ ತಾಳಿಕಟ್ಟೆ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರೆ ಹಾಗೂ ಬೇರೆ ಪಕ್ಷಕ್ಕೆ ಸೇರುತ್ತಾರೆ ಎಂಬೆಲ್ಲಾ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ‌. ಆದರೆ ಇದೆಲ್ಲಾ ಸತ್ಯಕ್ಕೆ ದೂರವಾದುದ್ದಾಗಿದ್ದು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಶಿಕ್ಷಕ ಸಂಘಟನೆಗಳು ನಿರ್ಧರಿಸಿದಂತೆ ನಾನು ಪಕ್ಷೇತರವಾಗಿಯೇ ಸ್ಪರ್ಧಿಸುತ್ತೇನೆ ಹಾಗೂ ಈ ಬಗ್ಗೆ ಯಾವುದೇ ಅನುಮಾನ ಬೇಡ ಪ್ರಚಾರಕ್ಕೆ ಹೋದಲೆಲ್ಲಾ ಉತ್ತಮವಾದ ಪ್ರತಿಕ್ರಿಯೆ ಬರುತ್ತಿರುವುದು ಹಾಗೂ ಇತರೇ ಅಭ್ಯರ್ಥಿಗಳು ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಅವರಿಗೆ ಶಿಕ್ಷಕರು ನೀಡುತ್ತಿರುವ ನಕಾರಾತ್ಮಕ ಪ್ರತಿಕ್ರಿಯೆಯನ್ನು ಕಂಡು ಹೀಗೆಲ್ಲಾ ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ ಇದರಲ್ಲೊ ಯಾವುದೇ ಸತ್ಯಾಂಶವಿಲ್ಲ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!