ತುಮಕೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ದಿನಾಂಕ 24-04-2024ರಂದು ಜಿಲ್ಲೆಯ ಕೆಬಿ ಕ್ರಾಸ್ ಬಳಿ ಹಿಂದುಳಿದ ವರ್ಗದವರ ಹಾಗೂ ಬಿಜೆಪಿಯ ಬೃಹತ್ ಸಮಾವೇಶವನ್ನು ನಡೆಸಲು ಪೂರ್ವ ತಯಾರಿ ಮಾಡಿಕೊಳ್ಳಲಾಗಿತ್ತು. ಈ ಸಮಾವೇಶಕ್ಕೆ ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತುಮಕೂರು ನಗರ, ಗ್ರಾಮಾಂತರ, ಗುಬ್ಬಿ, ಚಿ.ನಾ.ಹಳ್ಳಿ, ಕೊರಟಗೆರೆ, ಮಧುಗಿರಿ, ತಿಪಟೂರು, ತುರುವೇಕೆರೆ ಭಾಗದ ಜನರನ್ನು ಜಮಾವಣೆ ಮಾಡಬೇಕು ಎನ್ನುವ ತಯಾರಿಯೂ ನಡೆದಿತ್ತು.
ಈ ಬೃಹತ್ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಕೇಂದ್ರ ಗೃಹ ಸಚಿವರು ಹಾಗೂ ಬಿಜೆಪಿ ಚುನಾವಣಾ ಚಾಣಕ್ಯ ಎಂದೇ ಬಿಂಬಿತವಾಗಿರುವ ಅಮಿತ್ ಷಾ ಅವರುಗಳ ಆಗಮನದ ನಿರೀಕ್ಷೆಯಲ್ಲಿದ್ದರು. ಆದರೆ ಚುನಾವಣೆಯ ಬಹಿರಂಗ ಪ್ರಚಾರವು 24-04-2024ರ ಸಂಜೆ 6 ಗಂಟೆಗೆ ಮುಕ್ತಾಯವಾಗುವುದರ ಪರಿಣಾಮ ಹಾಗೂ ಪ್ರಚಾರದ ಕಾರ್ಯದ ಸಮಯದ ಒತ್ತಡ ನಿಮಿತ್ತ ಈ ಸಮಾವೇಶವನ್ನು ರದ್ದುಗೊಳಿಸಲಾಗಿದೆಂದು ತಿಳಿದು ಬಂದಿದೆ.
ಇನ್ನುಳಿದಂತೆ ಇದಕ್ಕೆ ಪರ್ಯಾಯವಾಗಿ ತುಮಕೂರು ನಗರದಲ್ಲಿ ಬೃಹತ್ ರೋಡ್ ಷೋ ನಡೆಸಲು ತೀರ್ಮಾನಿಸಲಾಗಿದೆಂದು ಇದರ ಮೂಲಕ ಬಹಿರಂತ ಪ್ರಚಾರಕ್ಕೆ ತೆರೆ ಎಳೆಯಲಾಗುವುದು ಎಂದು ಜಿಲ್ಲಾ ಬಿಜೆಪಿ ಆಂತರಿಕ ವಲಯದಿಂದ ಕೇಳಿ ಬಂದಿದೆ.