ತುಮಕೂರು: ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿ ಬಿಜೆಪಿಯ ಜನಪರ ಯೋಜನೆಗಳನ್ನು ಕೈಬಿಟ್ಟು ಕಾಂಗ್ರೆಸ್ ಸರ್ಕಾರ ಜನರಿಗೆ ಅನ್ಯಾಯ ಮಾಡಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಜಿಲ್ಲಾ ಬಿಜೆಪಿ ವಕ್ತಾರ ಟಿ.ಅರ್.ಸದಾಶಿವಯ್ಯ ಟೀಕಿಸಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಅವರು 60 ವರ್ಷಗಳ ಕಾಲ ನಾಲ್ಕು ತಲೆಮಾರು ಆಡಳಿತ ನಡೆಸಿದ ಕಾಂಗ್ರೆಸ್ 147 ವರ್ಷದ ಹಳೆಯದಾದ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಕೊಟ್ಟರೆ ಬದಲಾವಣೆ ತರುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದೆ. ಹಾಗಾದರೆ ಇಷ್ಟು ವರ್ಷ ಕೊಟ್ಟ ಅವಕಾಶದಲ್ಲಿ ದೇಶದ ಅಭಿವೃದ್ಧಿಗಾಗಿ ಏನೂ ಮಾಡಿಲ್ಲ ಎಂದು ಕಾಂಗ್ರಸ್ ಒಪ್ಪಿಕೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ದೇಶದ ಜನರ ಭರವಸೆ ಮತ್ತು ಆಶೋತ್ತರಗಳ ಜೊತೆಗೆ ಯಾವುದೇ ಸಂಬಂಧವಿಲ್ಲ ಎಂಬುದನ್ನು ಆ ಪಕ್ಷದ ಚುನಾವಣಾ ಪ್ರಣಾಳಿಕೆ ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ.