ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಧ್ವನಿಯಾಗುವೆ : ಲೋಕಶಕ್ತಿ ಪಕ್ಷದ ಅಭ್ಯರ್ಥಿ ರಂಗನಾಥ

ತುಮಕೂರು : ತುಮಕೂರು ಜಿಲ್ಲೆಯಲ್ಲಿ ತಾಂಡವವಾಡುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಡುವ ಪ್ರಯತ್ನ ಮಾಡಿ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲುವ ಸಂಕಲ್ಪ ಮಾಡಿದ್ದೇನೆಂದು ತುಮಕೂರು ಲೋಕಸಭಾ ಕ್ಷೇತ್ರದ ಲೋಕಶಕ್ತಿ ಪಕ್ಷದ ಅಭ್ಯರ್ಥಿ ರಂಗನಾಥ್‌ರವರು ತಿಳಿಸಿದರು.

 

 

 

ಅವರು ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಂಸತ್ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಿ ಹೊರ ಬಂದು ಸುದ್ಧಿಗಾರರೊಂದಿಗೆ ಮಾತನಾಡಿ ತುಮಕೂರು ಜಿಲ್ಲೆ ಕಲ್ಪತರು ನಾಡು ಎಂದು ಹೆಸರುವಾಸಿಯಾಗಿದ್ದು ಜಿಲ್ಲೆಯಲ್ಲಿ ಕೊಬ್ಬರಿ, ತೆಂಗು ಬೆಳೆ ಸೇರಿದಂತೆ ಹಲವಾರು ಸಮಸ್ಯೆಗಳು ರೈತರಿಗಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆಂದರು.

 

 

 

ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆಯು ಅಧಿಕವಾಗಿದ್ದು, ಯುವಕರು ವಿದ್ಯಾಭ್ಯಾಸ ಮುಗಿಸಿಕೊಂಡು ಹೊರ ಬಂದು ಉದ್ಯೋಗವಿಲ್ಲದೇ ಪರದಾಡುತ್ತಿರುವ ಪರಿಸ್ಥಿತಿ ದಿನನಿತ್ಯ ಕಣ್ಣು ಮುಂದಿದ್ದು, ವಿದ್ಯಾವಂತ ಯುವಕರನ್ನು ಉದ್ಯೋಗಸ್ಥರನ್ನಾಗಿ ಮಾಡುವ ಹಾಗೂ ಜಿಲ್ಲೆಯನ್ನು ಔದ್ಯೋಗಿಕ ಜಿಲ್ಲೆಯನ್ನಾಗಿ ಕನಸ್ಸನ್ನು ಹೊಂದಿದ್ದು, ಜಿಲ್ಲೆಗೆ ಕೈಗಾರಿಕೆಗಳನ್ನು ತರುವ ಪ್ರಯತ್ನ ಮಾಡಿ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ಭರವಸೆಯನ್ನು ನೀಡುವುದಾಗಿ ತಿಳಿಸಿದರು.

 

 

ಶಿಕ್ಷಣ ಮತ್ತು ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿ, ಬಡ, ಮಧ್ಯಮ ವರ್ಗದ ಜನರಿಗೆ ಗುಣಾತ್ಮಕ ಶಿಕ್ಷಣ, ಕುಡಿಯುವ ನೀರು, ವಸತಿ ಹಾಗೂ ಇನ್ನಿತರೆ ಅತ್ಯವಶ್ಯಕ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿ, ಈ ಬಾರಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ ಸರ್ವ ಮತದಾರರು ಜಿಲ್ಲೆಯ ಏಳ್ಗೆಗಾಗಿ ಮತದಾನ ಮಾಡಬೇಕೆಂದು ಕೋರಿದರು.

Leave a Reply

Your email address will not be published. Required fields are marked *

error: Content is protected !!