ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನರ ಜೇಬಿಗೆ ಕತ್ತರಿ ಹಾಕಿದೆ : ಮಾಜಿ ಸಿ ಎಂ ಕುಮಾರಸ್ವಾಮಿ

ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಾಲದ ಹಣದಲ್ಲಿ ಗ್ಯಾರಂಟಿ ಯೋಜನೆಗಳಿಗೆ 53 ಕೋಟಿ ರೂ. ಹಣ ಇಟ್ಟು, ಸಾಲದ ಹೊರೆಯನ್ನು ಜನರ ಮೇಲೆ ಹೇರಿದೆ. ಈ ಸಾಲವನ್ನು ಸಿಎಂ ಸಿದ್ದರಾಮಯ್ಯ ಆಗಲಿ, ಡಿಕೆ.ಶಿವಕುಮಾರ್ ಆಗಲಿ ತೀರಿಸುವುದಿಲ್ಲ, ರಾಜ್ಯದ ಜನರೇ ತೆರಿಗೆ ನೀಡುವ ರೂಪದಲ್ಲಿ ಸಾಲ ತೀರಿಸಬೇಕಾಗಿದೆ. ಸಾಲದ ಗ್ಯಾರಂಟಿ ಯೋಜನೆ ನೀಡಿ ನುಡಿದಂತೆ ನಡೆದಿದ್ದೇವೆ ಎಂದು ಕಾಂಗ್ರೆಸ್‍ನವರು ಹೇಳಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

 

 

Screenshot

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೆಬ್ಬೂರಿನಲ್ಲಿ ಶನಿವಾರ ರಾತ್ರಿ ಎನ್.ಡಿ.ಎ ಅಭ್ಯರ್ಥಿ ವಿ. ಸೋಮಣ್ಣನವರ ಪರ ಮತಯಾಚಿಸಿ ಮಾತನಾಡಿದ ಅವರು, ದೇಶದ ಭದ್ರತೆ, ಆರ್ಥಿಕ ಸುಭದ್ರತೆ ದೃಷ್ಟಿಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಹಲವು ನಾಯಕರು ತೀರ್ಮಾನ ಮಡಿದ್ದಾರೆ. ಇದೇ ಕಾರಣಕ್ಕೆ ರಾಜ್ಯದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಮೋದಿಯವರ ಕೈ ಬಲಪಡಿಸಲು ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋಮಣ್ಣನವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

error: Content is protected !!