ತುಮಕೂರು : ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ರೂ. 3 ಏರಿಸಿರುವುದನ್ನು ಖಂಡಿಸಿ ಇಂದು ಜಿಲ್ಲಾ ಬಿಜೆಪಿ ವತಿಯಿಂದ ಸೈಕಲ್ ಜಾಥಾ, ಕಾಲ್ನಡಿಗೆ ಜಾಥಾ ಮಾಡುವುದರ ಮೂಲಕ ಪ್ರತಿಭಟನೆಯನ್ನು ಮಾಡಿದರು.
ಭದ್ರಮ್ಮ ವೃತ್ತದಲ್ಲಿರುವ ಬಿಜೆಪಿ ಕಛೇರಿಯಿಂದ ಬಿ.ಹೆಚ್.ರಸ್ತೆ ಮೂಲಕ ಟೌನ್ ಹಾಲ್ (ಬಿಜಿಎಸ್ ವೃತ್ತ) ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಸೈಕಲ್ ಜಾಥಾ, ಕಾಲ್ನಡಿಗೆ ಜಾಥಾ ಜೊತೆಗೆ ವಿಶೇಷವಾಗಿ ಟಾಂಗಾ (ಕುದುರೆ ಗಾಡಿ), ಎತ್ತಿನಗಾಡಿಯ ಮೂಲಕ ಮೆರವಣಿಗೆ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.
ಪ್ರತಿಭಟನೆಯ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮುಖಂಡರುಗಳಾದ ವೈ.ಹೆಚ್.ಹುಚ್ಚಯ್ಯ, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.