ತುಮಕೂರು ಜಿಲ್ಲೆಯ ರೈತರಿಂದ ಖರೀದಿಸ್ಪಲಟ್ಟ ಉಂಡೇ ಕೊಬ್ಬರಿಗೆ ಸೂಕ್ತ ಬೆಲೆ ದೊರಕಲು ಕಾರಣರಾದ ಸಚಿವ ವಿ.ಸೋಮಣ್ಣ ರವರಿಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ರವರಿಂದ ಧನ್ಯವಾದ

 

 

 

 

 

ತುಮಕೂರು ಜಿಲ್ಲೆಯಲ್ಲಿ ೨೦೨೪ನೇ ಸಾಲಿನಲ್ಲಿ ರೈತರಿಂದ ಖರೀದಿಸ್ಪಲಟ್ಟ ಉಂಡೇ ಕೊಬ್ಬರಿ ಖರೀದಿಗೆ ಸಂಬಂದಪಟ್ಟ ಮೊತ್ತ ಪಾವತಿಯಾದ ಹಿನ್ನಲೆ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು ಸಂತಸ ವ್ಯಕ್ತಪಡಿಸಿದರು.

 

 

 

 

 

 

 

ಈ ಸಂದರ್ಭದಲ್ಲಿ ರೈತರ ಖಾತೆಗೆ ಹಣ ಸಂದಾಯವಾಗಲು ಸಹಕಾರಿಯಾದ ಸನ್ಮಾನ್ಯ ಪ್ರಧಾನ ಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರಿಗೆ, ಮಾನ್ಯ ಕೇಂದ್ರ ರೇಲ್ವೆ ಮತ್ತು ಮಾನ್ಯ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹಾಗೂ ಜಲಶಕ್ತಿ ರಾಜ್ಯ ಖಾತೆಯ ಸಚಿವರಾದ ಶ್ರೀ ಸೋಮಣ್ಣನವರಿಗೆ ತುಮಕೂರಿನ ರೈತರ ಪರವಾಗಿ ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತಾ, ಪ್ರಸಕ್ತ 2024ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27000 ರೈತರಿಂದ ಒಟ್ಟು 3,15,000 ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿ? ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು ರೂ.378 ಕೋಟಿಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸಬೇಕಾಗಿತ್ತು.

 

 

 

 

ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವರಾದ ಶ್ರೀ ವಿ.ಸೋಮಣ್ಣನವರ ಪ್ರಯತ್ನದಿಂದಾಗಿ ದಿನಾಂಕ:೦೫.೦೮.೨೦೨೪ರವರೆಗೆ ಸುಮಾರು ರೂ.೩೪೬.೫೦ ಕೋಟಿ ಮೊತ್ತವನ್ನು (ಪ್ರತಿಶತ 62 ರ?) ರೈತರ ಖಾತೆಗೆ ನೇರವಾಗಿ (ಡಿಬಿಟಿ ಮುಖೇನ) ಪಾವತಿಸಲಾಗಿದೆ. ಸುಮಾರು 24600 ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸಲಾಗಿದೆ. ಬಾಕಿ ಉಳಿದ ಸುಮಾರು 2438 ರೈತರ ಖಾತೆಗೆ ಅಂದಾಜು 31.64ಕೋಟಿ ಬಾಬ್ತನ್ನು ರೈತರಿಗೆ ಪಾವತಿಸಬೇಕಾಗಿದೆ (ಪ್ರತಿಶತ 8ರ? ಮಾತ್ರ). ಮಾನ್ಯ ಕೇಂದ್ರ ಸಚಿವರಾದ ಶ್ರೀ ವಿ.ಸೋಮಣ್ಣ ರವರು ಈ ಮೊತ್ತವನ್ನು ಅತೀ ಶೀಘ್ರದಲ್ಲಿ ತುಮಕೂರಿನ ರೈತರಿಗೆ ಪಾವತಿಸುವಂತೆ ರಾಜ್ಯದಲ್ಲಿನ ಸಂಬಂಧಪಟ್ಟ ಎಜೆನ್ಸಿಗೆ ನಿರ್ದೇಶನ ನೀಡಿದ್ದಾರೆ ಎಂದು ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ರವರು ತಿಳಿಸಿದರು.

 

 

 

 

 

 

 

 

ಮುಂದುವರೆದು, ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವರಾದ ಶ್ರೀ ಸೋಮಣ್ಣನವರು ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ ರೂ.೬೯೧ ಕೋಟಿಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸುವ ಸಲುವಾಗಿ ಕ್ರಮ ಜರುಗಿಸಲು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ನಗರ ಶಾಸಕರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!