ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ಖಂಡಿಸಿ ಮಾಜಿ ಶಾಸಕ ಡಿ ಸಿ ಗೌರೀಶಂಕರ್ ನೇತೃತ್ವದಲ್ಲಿ ಹೆಬ್ಬೂರಿನಲ್ಲಿ ಬೃಹತ್ ಪ್ರತಿಭಟನೆ

 

 

 

 

ತುಮಕೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ಕೂಡಲೇ ರಾಜ್ಯಪಾಲರು ಹಿಂಪಡೆಯಬೇಕೆಂದು ಆಗ್ರಹಿಸಿ ಮಾಜಿ ಶಾಸಕ ಡಿ ಸಿ ಗೌರೀಶಂಕರ್ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಮುಖಂಡರು ಹೆಬ್ಬೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

 

 

 

 

 

 

 

ಹೆಬ್ಬೂರು ಸರ್ಕಲ್ ನಲ್ಲಿ ಬೃಹತ್ ಬೃಹತ್ ಪ್ರತಿಭಟನೆ ನಡೆಸಿದ ಬಳಿಕ ಮೆರವಣಿಗೆ ನಡೆಸಿ ರಾಜ್ಯಪಾಲರ ನಡೆ ತೀವ್ರವಾಗಿ ಖಂಡಿಸಿದರು.ಬಳಿಕ ಹೆಬ್ಬೂರಿನಿಂದ ತುಮಕೂರಿನ ವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

 

 

 

 

 

 

 

ಈ ವೇಳೆ ಮಾಜಿ ಶಾಸಕ ಡಿ ಸಿ ಗೌರೀಶಂಕರ್ ಮಾತನಾಡಿ ಒಂದು ಸ್ಥಿರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್ ಪಕ್ಷಗಳು ರಾಜಕೀಯ ಅಸ್ತ್ರವಾಗಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಪಡಿಸಿಕೊಂಡು ಇನ್ನಿಲ್ಲದ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷವಲ್ಲದೆ ಸಾರ್ವಜನಿಕರು ಸಹ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದು, ಸರ್ಕಾರವನ್ನು ಪತನಗೊಳಿಸಿ, ವಾಮಮಾರ್ಗದಿಂದ ಅಧಿಕಾರ ಹಿಡಿಯುವ ಮೈತ್ರಿ ಪಕ್ಷಗಳ ಅಟಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದರು.

 

 

 

 

ದೇಶ ಕಂಡ ಧೀಮಂತ ನಾಯಕ,ಬಡವರ ಅನ್ನದಾತ ರಾಜ್ಯ ಕಂಡಂತಹ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಬಾಹಿರವಾಗಿ ವಿರೋಧ ಪಕ್ಷಗಳ ಕುತಂತ್ರದಿಂದ ರಾಜಕೀಯ ದುರುದ್ದೇಶದಿಂದ ಕೇಂದ್ರದ ಭ್ರಷ್ಟ ಬಿಜೆಪಿ ಪಕ್ಷದ ಕೈಗೊಂಬೆಯಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ವಿರೋಧಿಯಾದ ಪ್ರಾಸಿಕ್ಯೂಶನ್ ಜಾರಿಮಾಡಿದ ರಾಜ್ಯದ ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿದರು.

 

 

 

 

 

ಕಾಂಗ್ರೆಸ್ ಮುಖಂಡರಾದ ಜಿ.ಪಾಲನೇತ್ರಯ್ಯ, ಕೋಡಿಮುದ್ದನಹಳ್ಳಿ ಪ್ರಕಾಶ್, ನರಸಾಪುರ ಹರೀಶ್, ಸುವರ್ಣಗಿರಿಕುಮಾರ್, ನಾಗವಲ್ಲಿ ದೀಪು, ಹೆತ್ತೇನಹಳ್ಳಿ ಮಂಜುನಾಥ್ , ಹರಳೂರು ಪ್ರಕಾಶ್, ಗೌರಮ್ಮ, ನಾಗರತ್ನ ಸೇರಿದಂತೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು,

Leave a Reply

Your email address will not be published. Required fields are marked *

error: Content is protected !!