ಅಮಾನತ್ತು ಗೊಂಡ ಡಿವೈಎಸ್‌ಪಿ ವಿರುದ್ಧ ಮತ್ತೊಬ್ಬ ಮಹಿಳೆ ದೂರು

ಮಧುಗಿರಿ: ದೂರು ನೀಡಲು ಕಚೇರಿಗೆ ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನ ದಲ್ಲಿರುವ ಅಮಾನತ್ತುಗೊಂಡ ಮಧುಗಿರಿ ಡಿವೈಎಸ್‌ಪಿ ಎ.ರಾಮಚಂದ್ರಪ್ಪ ವಿರುದ್ಧ ಮತ್ತೊಬ್ಬ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.

 

 

 

 

 

ಕೊರಟಗೆರೆ ತಾಲ್ಲೂಕಿನ ಪರಿಶಿಷ್ಟ ಪಂಗಡದ ಮಹಿಳೆಯೊಬ್ಬರು ಈ ಸಂಬಂಧ ಬುಧವಾರ ಮಧುಗಿರಿ ಠಾಣೆಯಲ್ಲಿ ರಾಮಚಂದ್ರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ್ದಾರೆ. ನಿವೇಶನಕ್ಕಾಗಿ ಹಣ ಪಡೆದ ವ್ಯಕ್ತಿಯೊಬ್ಬ ನಿವೇಶನ ನೀಡದೆ, ಹಣವನ್ನೂ ಮರಳಿಸದೆ ಮೋಸ ಮಾಡಿದ್ದಾನೆ. ಆತನ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇ ಶನ ನೀಡುವಂತೆ ಕೋರಿ ಮಹಿಳೆ ರಾಜ್ಯ ಮಹಿಳಾ ಆಯೋಗದ ಮೊರೆ ಹೋಗಿ ದ್ದರು. ಈ ಸಂಬಂಧ ವಿಚಾರಣೆ ನಡೆಸುವಂತೆ ಮಹಿಳಾ ಆಯೋಗವು ತುಮಕೂರು ಜಿಲ್ಲಾ ಪೊಲೀಸ್‌ ಕಚೇರಿಗೆ ಪತ್ರ ಬರೆದಿತ್ತು. ‘ಈ ಪ್ರಕರಣದ ವಿಚಾರಣೆ ನೆಪದಲ್ಲಿ ನನ್ನನ್ನು ಕಚೇರಿಗೆ ಕರೆಸಿಕೊಂಡ ಡಿವೈಎಸ್‌ಪಿ ರಾಮಚಂದ್ರಪ್ಪ ಲೈಗಿಂಕ ದೌರ್ಜನ್ಯ ಎಸಗಿದ್ದಾರೆ’ ಎಂದು ಮಹಿಳೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!