ರಾಜ್ಯ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ - Vidyaranjaka

ರಾಜ್ಯ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ

ತುಮಕೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಂಸ್ಥೆಗಳು ಸೇರಿದಂತೆ ಅವರ ಪ್ರತಿಷ್ಠಿತ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.

 

 


ಡಾ. ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದ್ದು. ತುಮಕೂರಿನಲ್ಲಿರುವ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ (ಸಾಹೇ) , ಶ್ರೀ ಸಿದ್ಧಾರ್ಥ ಇಂಜಿನಿಯರಿಂಗ್‌ ಕಾಲೇಜು (ಎಸ್.ಎಸ್.ಐ.ಟಿ, ಕುಣಿಗಲ್ ಮುಖ್ಯರಸ್ತೆ, ತುಮಕೂರು), ಮಂಚಕಲ್ ಕುಪ್ಪೆ (ಜಾಸ್ ಟೋಲ್ ಬಳಿಯಿರುವ ಎಸ್.ಎಸ್.ಐ.ಟಿ ಕಾಲೇಜು) ಅಲ್ಲದೇ ನೆಲಮಂಗಲದ ಟಿ ಬೇಗೂರು ಬಳಿ ಇರುವ ಶ್ರೀ ಸಿದ್ಧಾರ್ಥ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ.

 

 

 

9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಾಲ್ಕು ವರ್ಷದ ಹಿಂದೆ 2019ರಲ್ಲಿಯೂ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿತ್ತು. ಅದಲ್ಲದೇ ಇತ್ತಿಚೆಗೆ ಡಾ. ಜಿ.ಪರಮೇಶ್ವರ್ ರವರು ತುಮಕೂರು ಜಿಲ್ಲೆಯಲ್ಲಿ ಅತೀ ಹೆಚ್ಚು ಬೆಲೆ ಬಾಳವ ಆಸ್ತಿಗಳನ್ನು ತಮ್ಮ ಸಂಸ್ಥೆ ಹಾಗೂ ಕುಟುಂಬಸ್ಥರ ಹೆಸರಿನಲ್ಲಿ ಖರೀದಿಸಿದ್ದರು ಎಂಬ ಗುಮಾನಿಯು ಎದ್ದಿದ್ದ ಬೆನ್ನಲ್ಲೇ ಈ ದಾಳಿ ನಡೆದಿರುವುದು ನಿಜಕ್ಕೂ ಆಶ್ಚರ್ಯಕರ ಸಂಗತಿಯಾಗಿದೆ.

Leave a Reply

Your email address will not be published. Required fields are marked *

error: Content is protected !!