ತುಮಕೂರು: ಸಚಿವ ಸಂಪುಟದಿದ ಕೆ.ಎನ್.ರಾಜಣ್ಣನವರನ್ನು ವಜಾಗೊಳಿಸಿದ ಕ್ರಮ ಖಂಡಿಸಿ,ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಒತ್ತಾಯಿಸಿ ಜಿಲ್ಲೆಯಾದ್ಯಂತ ಆಗಮಿಸಿದ್ದ ಸಹಸ್ರಾರು ಅಭಿಮಾನಿಗಳು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪಕ್ಷದ ಹೈಕಮಾಂಡ್‌ಗೆ ತಪ್ಪು ಮಾಹಿತಿ ನೀಡಿದ ಕಾಣದ ಕೈಗಳ ಪಿತೂರಿಯಿಂದ ಕೆ.ಎನ್.ಆರ್ ಸಚಿವ ಸ್ಥಾನ ಕಳೆದುಕೊಂಡತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆ.ಎನ್.ಆರ್, ಆರ್.ಆರ್ ಅಭಿಮಾನಿ ಬಳಗ, ಕಾಂಗ್ರೆಸ್ ಮುಖಂಡರು, ಹಿಂದುಳಿದ ವರ್ಗಗಳ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಅಲ್ಪಸಂಖ್ಯಾತ ಸಮುದಾಯ ಸೇರಿದಂತೆ ವಿವಿಧ ಸಮಾಜಗಳ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ನಗರಪಾಲಿಕೆ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಮುಖಂಡರು ಅಲ್ಲಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದರು. ಕೆ.ನ್.ರಾಜಣ್ಣನವರ ಭಾವಚಿತ್ರದ ಬಾವುಟ ಪ್ರದರ್ಶಿಸುತ್ತಾ, ಘೋಷಣೆಕೂಗುತ್ತಾ ಮೆರವಣಿಗೆ ಸಾಗಿಬಂದು ಜಿಲ್ಲಾಧಿಕಾರಿಕಚೇರಿ ಎದುರು ಪ್ರತಿಭಟನೆ ನಡೆಸಿದರು.ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್‌ಕುಮಾರ್ ಮಾತನಾಡಿ, ಕೆ.ಎನ್.ರಾಜಣ್ಣನವರು ಯಾವತಪ್ಪು ಮಾಡಿದರು ಎಂದು ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿದಿರಿ?ಕನಿಷ್ಟ ಒಂದು ನೋಟೀಸೂ ಕೊಡದೆ, ಸಮಾಜಾಯಿಷಿಯನ್ನೂ ಕೇಳದೆ, ಅಷ್ಟೂ ವರ್ಷಗಳಿಂದ ಕಾಂಗ್ರೆಸ್ ಪಕ್ಷಕಟ್ಟಿ ಬೆಳೆಸಲು ಶ್ರಮಿಸಿದ ಪ್ರಭಾವಿ ನಾಯಕನನ್ನು ಏಕಾಏಕಿ ಸಚಿವ ಸಂಪುಟದಿAದ ತೆಗೆದು ಅಪಮಾನ ಮಾಡಲಾಗಿದೆ.ಇದರ ಹಿಂದೆ ಕೆಲವರ ಪಿತೂರಿ ಇದೆ.ವಾಲ್ಮೀಕಿ ಸಮಾಜವನ್ನು ತುಳಿಯುವ ಹುನ್ನಾರ ನಡೆದಿದೆ.ಹಿಂದೆ ನಾಗೇಂದ್ರ, ಈಗ ಕೆ.ಎನ್.ರಾಜಣ್ಣನವರನ್ನು ರಾಜಕೀಯವಾಗಿ ತುಳಿಯಲಾಗಿದೆ ಎಂದು ಆರೋಪಿಸಿದರು.
ಮುಖಂಡ ಕಲ್ಲಹಳ್ಳಿ ದೇವರಾಜು ಮಾತನಾಡಿ, ಸುಮಾರು 50 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿತೊಡಗಿಕೊಂಡು, ಸಹಕಾರ ಕ್ಷೇತ್ರದಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸುತ್ತಿರುವಕೆ.ಎನ್.ರಾಜಣ್ಣನವರನ್ನು ಪಿತೂರಿ ಮಾಡಿ ಸಚಿವ ಸ್ಥಾನದಿಂದ ತೆಗೆದಿರುವುದು ಅವರ ಲಕ್ಷಾಂತರ ಅಭಿಮಾನಿಗಳಿಗೆ ನೋವಾಗಿದೆ.ಕಾಂಗ್ರೆಸ್ ಹೈಕಮಾಂಡ್‌ಅವರಿಗೆ ಮತ್ತೆ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ಒತ್ತಾಯಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ 10 ರಲ್ಲಿ 7 ಸ್ಥಾನ ಗಳಿಸಲು ಕೆ.ಎನ್.ಆರ್ ಕೊಡುಗೆ ಇದೆ. 30 ವರ್ಷಗಳಿಂದ ಕಾಂಗ್ರೆಸ್ ಗೆಲುವು ಸಾಧ್ಯವಾಗದ ಹಾಸನದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಅಭ್ಯರ್ಥಿ ಗೆಲುವು ಪಡೆಯಲು ಅಲ್ಲಿನ ಉಸ್ತುವಾರಿ ಸಚಿವರಾಗಿದ್ದ ಕೆ.ಎನ್.ರಾಜಣ್ಣನವರು ಪಕ್ಷನಿಷ್ಠೆ ಕಾರ್ಯತಂತ್ರಕಾರಣ.ಸರ್ಕಾರದ ಅನೇಕ ಯೋಜನೆಗಳಿಗೆ ಪ್ರೇರಣೆಯಾಗಿರುವ ಪ್ರಭಾವಿ ನಾಯಕ ರಾಜಣ್ಣನವರನ್ನು ಸಚಿವ ಸ್ಥಾನದಿಂದತೆಗೆದಿರುವುದು ಖಂಡನೀಯ.ಕಾಂಗ್ರೆಸ್ ಪಕ್ಷ ಮತ್ತಷ್ಟು ಸದೃಢವಾಗಿ ಸಂಘಟನೆಯಾಗಬೇಕಾದರೆ ಕೆ.ಎನ್.ರಾಜಣ್ಣನವರಿಗೆ ಮತ್ತೆ ಗೌರವದ ಸ್ಥಾನಮಾನ ನೀಡಬೇಕು.ಇಲ್ಲವಾದಲ್ಲಿ ತುಮಕೂರು ಬಂದ್ ಮಾಡಿ, ನಿರಂತರ ಹೋರಾಟ ನಡೆಸುವುದಾಗಿ ಹೇಳಿದರು.
ಮುಸ್ಲಿಂ ಮುಖಂಡ ನಿಸಾರ್ ಅಹಮದ್,ರಾಯಸಂದ್ರರವಿಕುಮಾರ್, ಟಿ.ಪಿ.ಮಂಜುನಾಥ್, ಧನಿಯಾಕುಮಾರ್,ಜಿ.ಜೆ.ರಾಜಣ್ಣ, ಜಿ.ಆರ್.ರವಿ, ನರಸೀಯಪ್ಪ, ಜೆ.ಕೆ.ಅನಿಲ್,ಆರ್.ಪಾತಣ್ಣ ಸೇರಿದಂತೆ ವಕೀಲರು, ವಿವಿಧ ಸಹಕಾರ ಸಂಸ್ಥೆಗಳ ಮುಖಂಡರು,ಗ್ರಾಮಪಂಚಾಯ್ತಿ ಅಧ್ಯಕ್ಷರು ಸದಸ್ಯರು, ವಿವಿಧ ಸಮಾಜಗಳ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.