.
ಪಾವಗಡ: ತನ್ನ ಇಬ್ಬರು ಮಕ್ಕಳ ಕತ್ತು ಕೊಯ್ದು ಹತ್ಯೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಶನಿವಾರ ನಡೆದಿದೆ.
ಒಂದೂವರೇ ವರ್ಷ ಹೆಣ್ಣುಮಗು ಹಾಗೂ ನಾಲ್ಕು ವರ್ಷದ ಗಂಡು ಮಗುವಿನ ಕತ್ತು ಕೊಯ್ದು ಸಾಯಿಸಿದ ನಂತರ ತಾಯಿ ಸರಿತಾ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಗಂಡ ಸಂತೋಷ್ ಲಗೇಜ್ ಆಟೋ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಎಂಬುದಾಗಿ ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಹಾಗೂ ಪಾವಗಡ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಲಾಗುತ್ತಿದೆ. ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.