ತುಮಕೂರು – ತುಮಕೂರಿನಲ್ಲಿ ರಾಜ್ಯ ಸರ್ಕಾರದಿಂದ ಮೂರು ವರ್ಷದ ಆಡಳಿತ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮೇ 19ರಂದು ತುಮಕೂರಿನಲ್ಲಿ ಸರ್ಕಾರದಿಂದ ಸಾಧನ ಸಮಾವೇಶ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮಕ್ಕೆ ಕೇವಲ ಒಂದು ದಿನ ಬಾಕಿ ಇದ್ದು.

ಇದೇ ವೇಳೆಯಲ್ಲಿ ತುಮಕೂರು ಜಿಲ್ಲೆಯ ಹಲವು ಭಾಗಗಳಲ್ಲಿ ವಸತಿ ವಂಚಿತ ಕುಟುಂಬಗಳ ನೇತೃತ್ವದಲ್ಲಿ ಹಾಗೂ ವಸತಿ ರಹಿತ ಹೋರಾಟ ಸಮಿತಿ ವತಿಯಿಂದ ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು.
ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರು ಮುಂಜಾನೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಗುಡಿಸಲು ನಿರ್ಮಿಸಿ ಪ್ರತಿಭಟನೆಗೆ ಮುಂದಾಗಿದ್ದರು.

ಆದರೆ ಇದೇ ಸಂದರ್ಭದಲ್ಲಿ ಪ್ರತಿಭಟನೆಯ ಬಿಸಿ ಕಂಡ ಪೊಲೀಸರು ಸ್ಥಳದಲ್ಲಿದ್ದ ಹೋರಾಟಗಾರರನ್ನು ಬಂಧನ ಮಾಡಿ ಬೆರಡೆಗೆ ಸ್ಥಳಾಂತರ ಮಾಡಿದ್ದಾರೆ.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹೋರಾಟಗಾರ ನಾಗಭೂಷಣ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ವಿವಿಧ ಬೇಡಿಕೆಗಳನ್ನ ಈಡೇರಿಸುತ್ತೇವೆ ಎಂದು ಕಾಲಾವಕಾಶ ಕೇಳಿದ್ದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ನಾವು ಸ್ಥಳದಲ್ಲಿನಿಂದ ಕದಲಿರುವುದಿಲ್ಲ ಎಂದು ಪಟ್ಟು ಹಿಡಿದ ಪ್ರತಿಭಟನಾಕಾರರು.
ಪ್ರತಿಭಟನೆ ಕೈಬಿಡಲು ನಿರಾಕರಿಸಿದ ಪ್ರತಿಭಟನಾಕಾರರನ್ನು ಕೂಡಲೇ ಬಂಧನ ಮಾಡಿ ಸ್ಥಳದಲ್ಲಿದ್ದ ಗುಡಿಸಲುಗಳನ್ನ ತೆರವುಗೊಳಿಸಿದ್ದಾರೆ.
ಇನ್ನು ಸ್ಥಳಕ್ಕೆ ಅಡಿಷನಲ್ ಎಸ್. ಪಿ ಗೋಪಾಲ್, ಪುರುಷೋತ್ತಮ್,ಡಿವೈಎಸ್ಪಿ ಚಂದ್ರಶೇಖರ್, ಸರ್ಕಲ್ ಇನ್ಸ್ಪೆಕ್ಟರ್ ನದಾಫ್ ಅವಿನಾಶ್, ನವೀನ್ ಸೇರಿದಂತೆ ವಿವಿಧ ಠಾಣೆಯ ಪೊಲೀಸರು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.
