ತುಮಕೂರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಇಂದು ತುಮಕೂರು ಜಿಲ್ಲಾ ಸವಿತಾ ಸಮಾಜ ಯುವ ಪಡೆ (ರಿ) ಇವರ ವತಿಯಿಂದ ಆಯೋಜಿಸಲಾಗಿದ್ದ ಸವಿತಾ ಸಮಾಜದ ಜಾಗೃತಿ ಹಾಗೂ ಶೈಕ್ಷಣಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸವಿತಾ ಸಮಾಜದ ಹಲವಾರು ಮುಖಂಡರು ತಮ್ಮ ವೈಯಕ್ತಿಕ ವರ್ಚಸ್ಸಿನಿಂದ ಇಂದು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉತ್ತಮವಾದ ಸಾಧನೆಯನ್ನು ಮಾಡಿದ್ದಾರೆ ಸಮಾಜದ ಹಿರಿಯ ಸಾಧಕರ ಮಾರ್ಗದರ್ಶನದಲ್ಲಿ ಇಂದಿನ ಯುವಕರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಇಂದು ತುಮಕೂರು ಜಿಲ್ಲೆಯ ಯುವಪಡೆ ನಿಜಕ್ಕೂ ಉತ್ತಮ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಾ ಬಂದಿರುತ್ತದೆ ಕಟ್ ವೆಲ್ ರಂಗನಾಥ್ ಅವರು ಸಮಾಜದ ಯುವ ಪೀಳಿಗೆಗೆ ಜಾಗೃತಿ ಮತ್ತು ಶೈಕ್ಷಣಿಕ ಸಮಾವೇಶವನ್ನು ಆಯೋಜನೆ ಮಾಡಿರುವುದು ಶ್ಲಾಘನೆಯ ವಿಚಾರ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ನಾನು ಆಶಿಸುತ್ತೇನೆ ಸವಿತಾ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸದಾ ನನ್ನ ಸಹಕಾರವಿರುತ್ತದೆ ಎಂದು ತಿಳಿಸಿದರು.

ಸವಿತಾ ಸಮಾಜದ ಮುಖಂಡರು ಹಾಗೂ ಟಿಟಿಡಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಎನ್.ಎಸ್.ನರೇಶ್ ಮಾತನಾಡಿ ರಾಜ್ಯದಲ್ಲಿ ಸವಿತಾ ಸಮಾಜದ ಯುವ ಜನತೆಗೆ ಹಾಗೂ ಸಮಾಜಕ್ಕೆ ಸರ್ಕಾರದಿಂದ ಬರುವ ಸೌಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವಂತಹ ಕೆಲಸವಾಗಬೇಕಾಗಿದೆ ಅಂತಹ ಕೆಲಸವನ್ನು ತುಮಕೂರು ಜಿಲ್ಲೆಯಲ್ಲಿ ರಂಗನಾಥ್ ಅವರು ಪ್ರಾರಂಭ ಮಾಡಿದ್ದು ಸಂತಸದ ವಿಚಾರವಾಗಿದೆ ಸವಿತಾ ಸಮಾಜ ಮುಖ್ಯವಾಗಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ರಾಜಕೀಯವಾಗಿ ಸಮಾಜದ ಮುನ್ನೆಲೆಗೆ ಬರಬೇಕಾದ ಅನಿವಾರ್ಯತೆ ಇದೆ ಈ ಹಿಂದೆ ಇದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ನಮ್ಮ ಸಮಾಜಕ್ಕೆ ಅತಿ ಹೆಚ್ಚಿನ ಪ್ರೋತ್ಸಾಹ ನೀಡಿತ್ತು . ಅದೇ ರೀತಿಯಾಗಿ ಈಗಿನ ಯುವಕರು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಅದಕ್ಕೆ ನಾವೆಲ್ಲರೂ ಜಾಗೃತರಾಗಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಮತ್ತು ರಾಜಕೀಯವಾಗಿ ಬೆಳೆದಾಗ ಇಂತಹ ಯೋಜನೆಗಳನ್ನು ನಾವು ನಮ್ಮ ಸಮಾಜಕ್ಕೆ ನೀಡುವಂತಹ ಶಕ್ತಿ ನಮ್ಮಲ್ಲಿ ಬರುತ್ತದೆ ಎಂದು ತಿಳಿಸಿದರು ತುಮಕೂರು ಜಿಲ್ಲೆಯಲ್ಲಿ ಪ್ರಾರಂಭವಾಗಿರುವ ಸವಿತಾ ಸಮಾಜದ ಯುವ ಪಡೆಗೆ ನಾನು ತನು ಮನ ಧನ ನೀಡುತ್ತಾ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.

ತುಮಕೂರು ಜಿಲ್ಲೆಯ ಸವಿತಾ ಸಮಾಜದ ಯುವ ಪಡೆಯ ಜಿಲ್ಲಾಧ್ಯಕ್ಷರಾದ ಕಟ್ ವೆಲ್ ರಂಗನಾಥ್ ರವರು ಮಾತನಾಡಿ ನಾನು ಒಂದು ಸಣ್ಣ ಸಮುದಾಯದಲ್ಲಿ ಜನಿಸಿ, ಆ ಸಮುದಾಯಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ದೃಷ್ಟಿಯಿಂದ ತುಮಕೂರು ಜಿಲ್ಲೆಯಲ್ಲಿ ಸವಿತಾ ಸಮಾಜದ ಯುವಪಡೆಯನ್ನು ಕಟ್ಟುವ ಮೂಲಕ ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಸಾಕಷ್ಟು ಅಶಕ್ತರಿಗೆ ಶಕ್ತಿ ನೀಡುವ ಮೂಲಕ ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತಾ ಬಂದಿದ್ದೇವೆ ನಮ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ನೀಡುತ್ತಾ ಅವರ ವಿದ್ಯಾಭ್ಯಾಸ ಹೆಚ್ಚಿನ ರೀತಿಯಲ್ಲಿ ನಡೆಯುವಂತೆ ಮಾಡುವುದೇ ನಮ್ಮ ಸಂಕಲ್ಪವಾಗಿದೆ ನಮ್ಮ ಸಮಾಜದ ಹಿರಿಯರು ಮತ್ತು ಉದ್ಯಮಿಗಳು ನಮಗೆ ಇನ್ನೂ ಹೆಚ್ಚಿನ ಸಹಕಾರ ನೀಡಿದರೆ ನಾವುಗಳು ಇಂತಹ ಹಲವಾರು ರೀತಿಯ ಜಾಗೃತಿ ಮತ್ತು ಸಮಾಜವನ್ನು ಒಗ್ಗೂಡಿಸುವಂತಹ ಕೆಲಸ ಮಾಡಲಿಕ್ಕೆ ಅನುಕೂಲವಾಗುತ್ತದೆ ಹಾಗಾಗಿ ನಿಮ್ಮೆಲ್ಲರ ಸಹಕಾರ ನಮ್ಮ ಯುವಪಡೆಗೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಸುಮಾರು 300 ಜನ ಸವಿತಾ ಸಮಾಜದ ಕಲಾವಿದರಿಗೆ ಗೌರವ ಸಮರ್ಪಣೆ, 200 ಜನ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರವನ್ನು ನೆರವೇರಿಸಲಾಯಿತು. ಕಾರ್ಯಕ್ರಮ ಪ್ರಾರಂಭಕ್ಕೂ ಮುಂಚಿತವಾಗಿ ಚುಟುಕು ಶೋಭಾಯಾತ್ರೆಯನ್ನು ಬಿಜಿಎಸ್ ವೃತ್ತದಿಂದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದವರೆಗೂ ಹಮ್ಮಿಕೊಂಡಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಸವಿತಾ ಸಮಾಜ ಯುವಪಡೆಯ ಜಿಲ್ಲಾಧ್ಯಕ್ಷರಾದ ಕಟ್ ವೆಲ್ ರಂಗನಾಥ್, ಸವಿತಾ ಸಮಾಜದ ಮುಖಂಡರುಗಳಾದ ಎನ್.ಎಸ್.ನರೇಶ್, ನಂದೀಶ್ ಎನ್, ರಮೇಶ್ ಬಾಬು, ಕಿರಣ್ ಕುಮಾರ್, ಡಾ. ವಿ.ವಿ.ಸದಾನಂದ್, ಡಾ. ಕೆ.ಸಿ.ಬಸವರಾಜು, ಲಕ್ಷ್ಮೀನಾರಾಯಣ (ಪಾಪಣ್ಣ), ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸವಿತಾ ಸಮಾಜದ ಅಧ್ಯಕ್ಷರು, ಪ್ರತಿನಿಧಿ ಹಾಗೂ ಸದಸ್ಯರುಗಳು ಮತ್ತು ಕಲಾವಿದರುಗಳು ಆಗಮಿಸಿದ್ದರು.
