ಹಾಲಿ ಕಾಂಗ್ರೆಸ್ ಸರ್ಕಾರ 40%+ ಸರ್ಕಾರ ಎಂದು ಆರೋಪಿಸಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್ ಮಂಜುನಾಥ್

ತುಮಕೂರು: ಇಂದು ತುಮಕೂರು ನಗರದ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್ ವತಿಯಿಂದ ಪತ್ರಿಕಾಗೋಷ್ಠಿ ಏರ್ಪಡಿಸಲಾಗಿದ್ದು ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಆರ್ ಮಂಜುನಾಥ್ ಮಾತನಾಡಿ ಪ್ರಸ್ತುತ ಕಾಂಗ್ರೆಸ್ ಸರ್ಕಾರ 40%+ ಸರ್ಕಾರ ಎಂದು ಆರೋಪಿಸಿದ್ದಾರೆ.

ಮುಂದುವರೆದು ಮಾತನಾಡುತ್ತಾ ಸನ್ಮಾನ್ಯ ಶ್ರೀ.ಸಿದ್ದರಾಮಯ್ಯನವರು ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಇವರ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವರೆ ವರ್ಷ ಕಳೆದರು ಕರ್ನಾಟಕ ರಾಜ್ಯ ಗುತ್ತಿಗೆದಾರರ ಈ ಕೆಳಕಂಡ ಹಲವಾರು ಸಮಸ್ಯೆಗಳು ಇದುವರೆವಿಗೂ ಕಾರ್ಯರೂಪಕ್ಕೆ ಬಂದಿರುವುದಿಲ್ಲ ಎಂದರು.

 

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ ಸುಮಾರು ರೂ. 38.000 ಸಾವಿರ ಕೋಟಿ ಮೊತ್ತವನ್ನು ಸುಮಾರು ಎರಡು ವರೆ ವರ್ಷಗಳಿಂದ ಬಾಕಿ ಉಳಿಸಿಕೊಂಡು ಬಂದಿರುವುದನ್ನು ಮಾನ್ಯ ಮುಖ್ಯಮಂತ್ರಿಗಳನ್ನು ಮತ್ತು ಹಲವಾರು ಸಚಿವರುಗಳನ್ನು ಭೇಟಿ ಮಾಡಿ, ಅವರ ಗಮನಕ್ಕೆ ತಂದಿರುತ್ತೇವೆ. ಆದರೆ ಇದುವರೆವಿಗೂ ಲೋಕೋಪಯೋಗಿ ಇಲಾಖೆ, ಬಿ.ಬಿ.ಎಂ.ಪಿ. ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಹೊರತು ಪಡಿಸಿ ಬೇರೆ ಇಲಾಖೆಗಳಲ್ಲಿ ಹಣವನ್ನು ಬಿಡುಗಡೆ ಮಾಡಿರುವುದಿಲ್ಲ ಎಂದು ತಿಳಿಸಿದರು

 

 

ಈ ಮೊತ್ತವನ್ನು ಒಂದೇ ಬಾರಿಯಲ್ಲದಿದ್ದರೂ ಹಂತ ಹಂತವಾಗಿಯಾದರೂ ಬಿಡುಗಡೆ ಮಾಡುವ ಪ್ರಾಮಾಣಿಕತೆಯನ್ನು ಸರ್ಕಾರ ತೋರಬೇಕಾಗಿತ್ತು. ಆದರೆ ಸರ್ಕಾರ ಗುತ್ತಿಗೆದಾರರನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿರುತ್ತದೆ. ಮಾನ್ಯ ಮುಖ್ಯಮಂತ್ರಿಗಳು ಹಲವಾರು ಸಾರಿ ಸಂಘದ ಪದಾಧಿ ಕಾರಿಗಳ ಜೊತೆಗೆ ಸಭೆಯನ್ನು ನಿಗದಿಪಡಿಸಿ ಯಾವುದೇ ನಿರ್ದಿಷ್ಟವಾದ ಕಾರಣವನ್ನು ನೀಡದೆ ಸಭೆಯನ್ನು ಮುಂದೂಡಿರುತ್ತಾರೆ. ಇದುವರೆವಿಗೂ ಅಧಿಕೃತವಾದ ಸಭೆಯನ್ನು ಕರೆದು ಚರ್ಚೆ ನಡೆಸಲು ಮಾನ್ಯ ಮುಖ್ಯಮಂತ್ರಿಗಳು ಹಿಂದೇಟು ಹಾಕುತ್ತಿದ್ದಾರೆ ಅಲ್ಲದೆ ಕರ್ನಾಟಕ ರಾಜ್ಯದ ಗುತ್ತಿಗೆದಾರರು ಸುಮಾರು ಎರಡು ವರೆ ವರ್ಷಗಳಿಂದ, ತಮ್ಮ ಮೇಲೆ ಅಪಾರವಾದ ಗೌರವ ಮತ್ತು ನಂಬಿಕೆಯನ್ನು ಇಟ್ಟುಕೊಂಡು ಇದುವರೆವಿಗೂ ತಾಳ್ಮೆಯಿಂದ ಇರುತ್ತೇವೆ ಎಂದರು.

 

ಇತಿಹಾಸಲ್ಲಿ ಪ್ರಮುಖ ಹಬ್ಬಗಳಾದ ಗೌರಿ – ಗಣೇಶ್, ದಸರಾ ಮತ್ತು ದೀಪಾವಳಿ ಸಮಯದಲ್ಲಿ ಗುತ್ತಿಗೆದಾರರಿಗೆ ಯಾವುದೇ ಸರ್ಕಾರವಾದರು ಬಾಕಿ ಹಣವನ್ನು ಬಿಡುಗಡೆ ಮಾಡುವ ಪರಿಪಾಠವನ್ನು ಬೆಳಸಿಕೊಂಡು ಬಂದಿರುತ್ತದೆ. ಆದರೆ ಇದುವರೆವಿಗೂ ಸರ್ಕಾರದಿಂದ ಹಣ ಬಿಡುಗಡೆ ಮಾಡಿರುವುದಿಲ್ಲ ಎಂದು ತಿಳಿಸಿದರು.

 

ಲೋಕೋಪಯೋಗಿ ಇಲಾಖೆ ಮತ್ತು ಬಿ.ಬಿ.ಎಂ.ಪಿ. ಹೊರತು ಪಡಿಸಿ ಬೇರೆ ಯಾವುದೇ ಇಲಾಖೆಯಲ್ಲಿ ಜೇಷ್ಠತೆಯನ್ನು ಪಾಲಿಸುತ್ತಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳನ್ನು ಮತ್ತು ವಿವಿಧ ಇಲಾಖೆಗಳ ಸಚಿವರನ್ನೂ ಎರಡು ಮೂರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು ಸಹ ಗುತ್ತಿಗೆದಾರರ ಸಂಕಷ್ಟಗಳನ್ನು ಬಗೆ ಹರಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

ವ್ಯಾಟ್ 4% ರಿಂದ ಜಿ.ಎಸ್.ಟಿ. 12% ವ್ಯತ್ಯಾಸದ ಮೊತ್ತವನ್ನು ಸರ್ಕಾರವೇ ಭರಿಸಲು ತೀರ್ಮಾನ ಕೈಗೊಂಡಿರುತ್ತಾರೆ, ಮುಂದುವರೆದು ಆರ್ಥಿಕ ಇಲಾಖೆ ಅಧಿಕಾರಿಗಳನ್ನು ಕರೆದು ಚೆರ್ಚಿಸಿದರು ಸಹ ಆದೇಶವಾಗಿರುವುದಿಲ್ಲ, ಪಕ್ಕದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಒರಿಸ್ಸಾ ಮತ್ತು ಮಹಾರಾಷ್ಟ್ರಗಳಲ್ಲಿ ಸುಮಾರು 5 ವರ್ಷಗಳ ಹಿಂದೆಯೇ ಜಾರಿಗೆ ಬಂದಿರುತ್ತದೆ ಎಂದರು.

 

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಎಂ.ಡಿ.ಪಿ. ಮತ್ತು ಇತರೇ ಸಮಸ್ಯೆಗಳನ್ನು ಬಗೆಹರಿಸಲು ಸಚಿವರು ಮತ್ತು ಸರ್ಕಾರದ ಕಾರ್ಯದರ್ಶಿ ಮಟ್ಟದಲ್ಲಿ ಹಲವಾರು ಸಭೆಗಳನ್ನು ನಡೆಸಲಾಗಿರುತ್ತದೆ ಆದರೂ ಸಹ ಸಮಸ್ಯೆ ಬಗೆಹರಿದಿರುವುದಿಲ್ಲ.

 

ನಗಾರಭಿವೃದ್ಧಿ ಇಲಾಖೆಯಲ್ಲಿ ಅಧಿಕಾರಿಗಳು 10 ಮಹಾನಗರ ಪಾಲಿಕೆಗಳಲ್ಲಿ ಪ್ಯಾಕೇಜ್ ಟೆಂಡ‌ಗಳನ್ನು ಕರೆದಿರುವುದರಿಂದ, ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ತುಂಬಾ ಅನ್ಯಾಯವಾಗಿರುತ್ತದೆ. ಸದರಿ ವಿಚಾರವಾಗಿ ಮಾನ್ಯ ಸಚಿವರುಗಳನ್ನು ಭೇಟಿ ಮಾಡಿ ಚರ್ಚಿಸಿದರು ಯಾವುದೇ ಪ್ರಯೋಜನವಾಗಿರುವುದಿಲ್ಲ.

 

ನಗಾರಭಿವೃದ್ಧಿ ಇಲಾಖೆಯಲ್ಲಿ ಮಧ್ಯವರ್ತಿಗಳೇ ಇಲಾಖೆಯ ಚಟುವಟಿಕೆಗಳನ್ನು ಅವರ ಖಾಸಗಿ ಕಛೇರಿಯಿಂದ ನಡೆಸುತ್ತಿದ್ದಾರೆ. ಇದು ತಮ್ಮ ಗಮನಕ್ಕೆ ಬಾರದೆ, ಟೆಂಡರ್ ಅನುಮೊದನೆಗೆ ಹಾಗೂ ಹಣ ಬಿಡುಗಡೆ ವ್ಯವಸ್ಥೆಯಲ್ಲಿ ಹಿಂದಿನ ಸರ್ಕಾರಕ್ಕಿಂತ “ಅಸ್ತ ವ್ಯಸ್ತ”ವಾಗಿರುತ್ತದೆ ಎಂದು ತಿಳಿಸಲು ಸಂಘವು ವಿಷಾಧ ವ್ಯಕ್ತಪಡಿಸುತ್ತದೆ.

 

ನಮ್ಮ ಸಮಸ್ಯೆಗಳನ್ನು ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳು ದಯವಿಟ್ಟು ತುರ್ತಾಗಿ ಕರ್ನಾಟಕ ರಾಜ್ಯ ಸಂಘದ ಪದಾಧಿಕಾರಿಗಳ ಸಭೆ ಕರೆಯಬೇಕೆಂದು ರಾಜ್ಯ ಸಂಘವು ಮನವಿ ಮಾಡಿಕೊಳ್ಳುತ್ತೇವೆ ಎಂದರು.

 

ದಿನಾಂಕ:28.12.2025ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿದ ಎಲ್ಲಾ ಗುತ್ತಿಗೆದಾರರು, ಅನುಭವಿಸುತ್ತಿರುವ ಬಾಕಿ ಇರುವ “ಹಣ ಬಿಡುಗಡೆ” ಹಾಗೂ ಇತರೆ ಸಮಸ್ಯೆಗಳನ್ನು ಗೌರವಾನ್ವಿತ ಸನ್ಮಾನ್ಯ ರಾಜ್ಯಪಾಲರು, ಗೌರವಾನ್ವಿತ ಹಿರಿಯರಾದ ಶ್ರೀ.ಮಲ್ಲಿಕಾರ್ಜುನ ಖರ್ಗೆ ಮತ್ತು ಭಾರತ ಸರ್ಕಾರದ ವಿರೋದ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ.ರಾಹುಲ್‌ ಗಾಂಧಿ ಯವರಿಗೆ ತಿಳಿಸಲು ಸಭೆಯು ಒಕ್ಕೂರಲಿಂದ ತೀರ್ಮಾನಿಸಲಾಗಿದೆ ಎಂದರು.

 

 

ಮಾನ್ಯ ಮುಖ್ಯಮಂತ್ರಿಗಳು ಅಧಿಕೃತ ಸಭೆಯನ್ನು ಕರೆಯದೆ ಇದ್ದರೆ ಪಬ್ರವರಿ ತಿಂಗಳ ಕೊನೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಇಲಾಖೆಯ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರವನ್ನು ಮಾಡಲು ದಿನಾಂಕ:28.12.2025ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಮತ್ತು ದಿನಾಂಕ:28.01.2026ರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನ ಮಾಡಿರುತ್ತೇವೆ ಎಂದು ತಿಳಿಸಿದರು .

 

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎ ಡಿ ಬಲರಾಮಯ್ಯ ಮುಖಂಡರಾದ ಸಿ ಡಿ ಕೃಷ್ಣ, ರಮೇಶ್, ಶ್ರೀನಿವಾಸ್, ಹೇಮಂತ್ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!