ನಕಲಿ ಪತ್ರಕರ್ತರ ಹಾವಳಿ ತಡೆಗಟ್ಟಲು ಎಸ್.ಪಿ.ಗೆ ಮನವಿ

ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅವರಿಗೆ ಮತ್ತು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ವತಿಯಿಂದ ನಕಲಿ ಪತ್ರಕರ್ತರ ಹಾವಳಿ, ಅನಧಿಕೃತವಾಗಿ ಪತ್ರಕರ್ತರೆಂದು ಹೇಳಿಕೊಂಡು ಆರ್.ಟಿ.ಐ ಹಾಗೂ ಇನ್ನಿತರೆ ಬೆದರಿಕೆಗಳನ್ನು ಹಾಕುತ್ತಾ ನೈಜ ಪತ್ರಕರ್ತರ ವರ್ಚಸ್ಸನ್ನು ಮತ್ತು ಹೆಸರುಗಳನ್ನು ಹಾಳು ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಚೀ.ನಿ.ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಎನ್.ಡಿ.ರಂಗರಾಜು ಹಾಗೂ ಇತರೆ ಸದಸ್ಯರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!