ಜೆಡಿಎಸ್ ಶಾಸಕರಿಗೆ ಬಿಜೆಪಿ ಶಾಸಕರ ಮೇಲೆ ಒಲವು

ಪ್ರಸ್ತುತ ನಡೆಯುತ್ತಿರುವ ರಾಜ್ಯ ರಾಜಕೀಯದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ಸಂಪುಟ ರಚನೆಯಲ್ಲಿ ತುಮಕೂರು ಜಿಲ್ಲೆಯ, ಚಿಕ್ಕನಾಯ್ಕನಹಳ್ಳಿ ಶಾಸಕರಾಗಿರುವ ಶ್ರೀ ಜೆ.ಸಿ. ಮಾಧುಸ್ವಾಮಿಯವರಿಗೆ ಸಚಿವ ಸ್ಥಾನ ನೀಡದಿದ್ದಲ್ಲಿ ಅದು ಎಲ್ಲ ರೀತಿಯಲ್ಲೂ ತುಂಬಲಾರದ ನಷ್ಟ ಎಂದು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಅಭಿಪ್ರಾಯಪಟ್ಟರು.

ತುಮಕೂರು ಗ್ರಾಮಾಂತರ ಶಾಸಕರು ತುಮಕೂರು ತಾಲ್ಲೂಕಿನ ಅಸಲೀಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ನಂತರ ಸುದ್ಧಿಗಾರರೊಂದಿಗೆ ಮಾತನಾಡಿ,  ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಸಚಿವ ಮಾಧುಸ್ವಾಮಿಯವರನ್ನು ತೆಗೆದುಕೊಳ್ಳಬೇಕು. ಮಾಧುಸ್ವಾಮಿಯವರು ಉತ್ತಮ ಸಂಸದೀಯ ಪಟುವಾಗಿದ್ದು, ಯಡಿಯೂರಪ್ಪನವರ ಸರ್ಕಾರ ಅಸ್ತಿತ್ವಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿ ವಿರೋಧ ಪಕ್ಷವನ್ನು ಪರಿಣಾಮಕಾರಿಯಾಗಿ ಸಮರ್ಥಿಸಿಕೊಂಡವರು ಅವರು. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕಾರಣ ಮಾಡದೇ ಜಿಲ್ಲೆಯಲ್ಲಿ ಪ್ರತಿಯೊಬ್ಬರನ್ನೂ ಸಮಾನ ರೀತಿಯಲ್ಲಿ ಕಂಡು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಸೇವೆ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಅವಶ್ಯಕವಾಗಿದ್ದು ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟರೆ ಅದು ರಾಜ್ಯಕ್ಕೇ ತುಂಬಲಾರದ ನಷ್ಟ ಎಂದು ಅಭಿಪ್ರಾಯಪಟ್ಟರು‌.

Leave a Reply

Your email address will not be published. Required fields are marked *

error: Content is protected !!