Get Covid Report in Whatsapp

ಕೊರೊನಾವೈರಸ್ ಅಲೆಗಳ ಕಾಟಕ್ಕೆ ಕಡಿವಾಣ ಹಾಕಲು ಲಸಿಕೆ ವಿತರಣೆ ವೇಗವನ್ನು ಸಮರೋಪಾದಿಯಲ್ಲಿ ಹೆಚ್ಚಿಸಲಾಗುತ್ತಿದೆ. ತಂತ್ರಜ್ಞಾನವನ್ನು ಬಳಸಿಕೊಂಡು ಲಸಿಕೆ ವಿತರಣೆ ವೇಗ ಹೆಚ್ಚಿಸುವುದಕ್ಕೆ ಕೇಂದ್ರ ಸರ್ಕಾರ ಹಲವು ರೀತಿ ಕ್ರಮಗಳನ್ನು ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ.

ಕೊವಿಡ್-19 ಲಸಿಕೆ ಪಡೆದುಕೊಂಡ ನಂತರದಲ್ಲಿ ಅದರ ಪ್ರಮಾಣ ಪತ್ರ ಪಡೆದುಕೊಳ್ಳುವುದು ಹೇಗೆ ಎಂಬ ಗೊಂದಲ ಮೊದಲಿನಿಂದಲೂ ಸಾರ್ವಜನಿಕರನ್ನು ಕಾಡುತ್ತಿತ್ತು. ಲಸಿಕೆ ಕೇಂದ್ರದಲ್ಲಿ ನೀಡುವ ಚಿಕ್ಕ ಚೀಟಿಯಿಂದ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದವು.

ಯಾರು ಲಸಿಕೆ ಪಡೆದುಕೊಂಡಿದ್ದಾರೆ, ಯಾರು ಲಸಿಕೆ ಪಡೆದುಕೊಂಡಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದಕ್ಕಾಗಿ ಸರ್ಕಾರದಿಂದ ಅಧಿಕೃತ ಪ್ರಮಾಣಪತ್ರವನ್ನು ಕೊ-ವಿನ್ ಅಪ್ಲಿಕೇಷನ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ. ಆದರೆ ಅದನ್ನು ತೆಗೆದುಕೊಳ್ಳುವುದು ಗ್ರಾಮೀಣ ಪ್ರದೇಶದ ಜನರು ಮತ್ತು ಅನಕ್ಷರಸ್ಥರಿಗೆ ತಿಳಿಯುತ್ತಿರಲಿಲ್ಲ. ಈ ಸಮಸ್ಯೆಯನ್ನು ನೀಗಿಸುವುದಕ್ಕಾಗಿ ಕೇಂದ್ರ ಸರ್ಕಾರವು ಮಹತ್ವದ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನು ಮುಂದೆ ನೀವು ಲಸಿಕೆ ಹಾಕಿಸಿಕೊಂಡಿದ್ದಲ್ಲಿ ವಾಟ್ಸಾಪ್ ಮೂಲಕವೇ ಪ್ರಮಾಣಪತ್ರ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ವಾಟ್ಸಾಪ್ ಮೂಲಕ ಪ್ರಮಾಣಪತ್ರ ಪಡೆದುಕೊಳ್ಳುವುದು ಹೇಗೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್ ಸಂದೇಶದಲ್ಲಿ ಏನಿದೆ, ದೇಶದಲ್ಲಿ ಎಷ್ಟು ಜನರಿಗೆ ಲಸಿಕೆ ನೀಡಲಾಗಿದೆ ಎಂಬುದರ ಸಂಪೂರ್ಣ ವಿವರವನ್ನು ಮುಂದೆ ಓದಿ.

ಮೊದಲು ಕೊ-ವಿನ್ ಮೂಲಕ ಲಸಿಕೆ ಸರ್ಟಿಫಿಕೇಟ್

ಭಾರತದಲ್ಲಿ ಈ ಮೊದಲು ಕೊರೊನಾವೈರಸ್ ಲಸಿಕೆ ಹಾಕಿಸಿಕೊಳ್ಳುವುದಕ್ಕೂ ಮೊದಲು ಅವರ ಆಧಾರ್ ಕಾರ್ಡ್ ಸೇರಿದಂತೆ ಒಂದು ಮಹತ್ವದ ದಾಖಲೆಗಳನ್ನು ಸರ್ಕಾರದ ಕೊ-ವಿನ್ ಅಪ್ಲಿಕೇಷನ್ ಮೂಲಕ ನೋಂದಣಿ ಮಾಡಿಕೊಳ್ಳಲಾಗುತ್ತಿತ್ತು. ಲಸಿಕೆ ಕೇಂದ್ರಗಳಲ್ಲಿಯೇ ಲಸಿಕೆ ವಿತರಣೆಗೆ ಹೆಸರು ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರ ಜೊತೆಗೆ ಸಾರ್ವಜನಿಕರು ಲಸಿಕೆಗಾಗಿ ಹೆಸರು ನೋಂದಾಯಿಸಿಕೊಳ್ಳುವುದಕ್ಕೂ ಅನುಮತಿ ನೀಡಲಾಗಿತ್ತು. ಒಂದು ಡೋಸ್ ಲಸಿಕೆ ಪಡೆದುಕೊಂಡ ನಂತರದಲ್ಲಿ ಅಕ್ಷರಸ್ಥರು ಇದೇ ಕೊ-ವಿನ್ ಅಪ್ಲಿಕೇಷನ್ ಮೂಲಕ ತಮ್ಮ ಲಸಿಕೆ ಪ್ರಮಾಣಪತ್ರವನ್ನು ಪಡೆದುಕೊಳ್ಳುತ್ತಿದ್ದರು. ಅದರೆ ಕೆಲವರಿಗೆ ಈ ಲಸಿಕೆ ಪ್ರಮಾಣಪತ್ರವನ್ನು ಪಡೆದುಕೊಳ್ಳುವುದೇ ದೊಡ್ಡ ಸವಾಲಾಗಿತ್ತು.

ಲಸಿಕೆಗಾಗಿ ಹೆಸರು ನೋಂದಣಿ ಮಾಡುವುದೇ ತಿಳಿದಿಲ್ಲ

ಕೊರೊನಾವೈರಸ್ ಲಸಿಕೆಯನ್ನು ಪಡೆದುಕೊಳ್ಳುವುದಕ್ಕೆ ಸರ್ಕಾರದ ಅಧಿಕೃತ ಕೊ-ವಿನ್ ಅಪ್ಲಿಕೇಷನ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಹೇಗೆ ಎನ್ನುವುದೇ ಎಷ್ಟೋ ಜನರಿಗೆ ಗೊತ್ತಿಲ್ಲ. ಇಂತಹುದರ ಮಧ್ಯೆ ಹಾಕಿಸಿಕೊಂಡ ಲಸಿಕೆಯ ಪ್ರಮಾಣಪತ್ರವನ್ನು ಆನ್ ಲೈನ್ ಮೂಲಕ ಪಡೆದುಕೊಳ್ಳುವುದು ತೀರಾ ಕಷ್ಟಸಾಧ್ಯವಾಗಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಲಸಿಕೆ ಪ್ರಮಾಣಪತ್ರವನ್ನು ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಈ ಎಲ್ಲ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಕೇಂದ್ರ ಸರ್ಕಾರವು ಕ್ರಮ ತೆಗೆದುಕೊಂಡಿದೆ.


ವಾಟ್ಸಾಪ್ ನಲ್ಲೇ ಕೊರೊನಾವೈರಸ್ ಲಸಿಕೆ ಪ್ರಮಾಣಪತ್ರ

‘ದೇಶದಲ್ಲಿ ಇನ್ನು ಮುಂದೆ ಕೊರೊನಾವೈರಸ್ ಲಸಿಕೆಯನ್ನು ಹಾಕಿಸಿಕೊಂಡವರು ತಮ್ಮ ಮೊಬೈಲ್ ನಲ್ಲೇ ಲಸಿಕೆಯ ಪ್ರಮಾಣಪತ್ರವನ್ನು ಪಡೆದುಕೊಳ್ಳಬಹುದು. ವಾಟ್ಸಾಪ್ ಮೂಲಕವೇ ನಿಮ್ಮ ಮೊಬೈಲಿಗೆ ಲಸಿಕೆ ಪ್ರಮಾಣಪತ್ರವನ್ನು ಕಳುಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ,’ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಸ್ಪಷ್ಟಪಡಿಸಿದ್ದಾರೆ. ತಂತ್ರಜ್ಞಾನ ಬಳಸಿ ಸಾಮಾನ್ಯ ಮನುಷ್ಯನ ಜೀವನದಲ್ಲಿ ಕ್ರಾಂತಿಕಾರಕ ಬದಲಾವಣೆ ತನ್ನಿ ಎಂದು ಟ್ವೀಟ್ ಮಾಡಿದ್ದಾರೆ.

ಈಗ 3 ಸುಲಭ ಹಂತಗಳಲ್ಲಿ MyGov ಕರೋನಾ ಸಹಾಯವಾಣಿ ಕೇಂದ್ರದ ಮೂಲಕ ಕೊವಿಡ್-19 ಲಸಿಕೆ ಪ್ರಮಾಣಪತ್ರವನ್ನು ಪಡೆಯಿರಿ. ಮೊದಲು ಮೊಬೈಲ್ ಸಂಖ್ಯೆಯನ್ನು ಸೇವ್ ಮಾಡಿಕೊಳ್ಳಿರಿ. ನಂತರದಲ್ಲಿ ವಾಟ್ಸಾಪ್ ಮೂಲಕ ‘covid certificate’ ಎಂದು ಕಳುಹಿಸಿರಿ. ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ OTP ಅನ್ನು ನಮೂದಿಸಿದ ಕೆಲವೇ ಸೆಕೆಂಡ್ ನಲ್ಲಿ ನಿಮ್ಮ ವಾಟ್ಸಾಪ್ ಸಂಖ್ಯೆಗೆ ಲಸಿಕೆ ಪ್ರಮಾಣಪತ್ರವನ್ನು ಕಳುಹಿಸಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!