ರಾಜಸ್ಥಾನದ ನಾಗೌರ್ ನಲ್ಲಿ ಮಂಗಳವಾರ ಬೆಳಿಗ್ಗೆ ಕ್ರೂಸರ್ ವೊಂದು ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದು ಇತರ 7 ಮಂದಿ ಗಾಯಗೊಂಡಿದ್ದಾರೆ.
ರಾಮ್ ದೆವ್ರಾ ಹಾಗೂ ಕರ್ಣಿಮಠ ದೇಗುಲಗಳಲ್ಲಿ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಪ್ರಯಾಣಿಕರು ಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯವರು.
“ಗಾಯಗೊಂಡವರನ್ನು ಬಿಕಾನೇರಿನ ನೋಖಾದಲ್ಲಿರುವ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ”
ಎಂದು ನಾಗೌರಿನ ಶ್ರೀ ಬಾಲಾಜಿ ಪೊಲೀಸ್ ಠಾಣೆಯ ಎಸ್ಎಚ್ಒ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘಟನೆಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ.