ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಘೋಷಣೆ ಮಾಡಿದ್ದಾರೆ.
ಜಿಲ್ಲೆಯಲ್ಲಿ ಪ್ರತಿದಿನ ವಿಧಿಸಿದ್ದ ನೈಟ್ ಕರ್ಫ್ಯೂ ಅವಧಿ ಕಡಿತ ಮಾಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ದೇವರ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಶಾಲಾ -ಕಾಲೇಜು ತೆರೆಯುವ ಕುರಿತು ಇನ್ನು ಯಾವುದೇ ತೀರ್ಮಾನವಾಗಿಲ್ಲ. ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು