ಧನ್ವಂತರಿ ಜಯಂತಿ
ಆಯುರ್ವೇದದ ದೃಷ್ಟಿಯಿಂದ ನಿಜ ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿಯಂದು ಧನ್ವಂತರಿ ಜಯಂತಿಯ ದಿನವಾಗಿದೆ. ವೈದ್ಯರು ಈ ದಿನ ಧನ್ವಂತರಿಯ (ಆಯುರ್ವೇದದ ದೇವತೆ) ಪೂಜೆಯನ್ನು ಮಾಡುತ್ತಾರೆ. ಬೇವಿನ ಎಲೆಯ ಸಣ್ಣ-ಸಣ್ಣ ತುಂಡು ಮತ್ತು ಸಕ್ಕರೆಯನ್ನು ‘ಪ್ರಸಾದ’ವೆಂದು ಎಲ್ಲರಿಗೂ ಹಂಚುತ್ತಾರೆ. ಇದರಲ್ಲಿ ಬಹುದೊಡ್ಡ ಅರ್ಥವಿದೆ. ಬೇವು ಅಮೃತದಿಂದ ಉತ್ಪನ್ನವಾಗಿದೆ. ಧನ್ವಂತರಿಯು ಅಮೃತ ತತ್ತ್ವವನ್ನು ಕೊಡುವವನಾಗಿದ್ದಾನೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಪ್ರತಿದಿನ ಬೇವಿನ ಐದಾರು ಎಲೆಗಳನ್ನು ತಿಂದರೆ ರೋಗಗಳು ಬರುವ ಸಂಭವವೇ ಕಡಿಮೆಯಾಗುತ್ತದೆ. ಬೇವಿಗೆ ಇಷ್ಟೊಂದು ಮಹತ್ವವಿರುವುದರಿಂದ ಈ ದಿನ ಅದನ್ನು ಧನ್ವಂತರಿಯ ಪ್ರಸಾದವೆಂದು ಕೊಡುತ್ತಾರೆ.
ಧನತ್ರಯೋದಶಿ
ಆಶ್ವಯುಜ ಕೃಷ್ಣ ತ್ರಯೋದಶಿ ಈ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು (ಕೋಶಾಗಾರ) ಪೂಜಿಸುತ್ತಾರೆ. ವ್ಯಾಪಾರಿ ವರ್ಷವು ಒಂದು ದೀಪಾವಳಿಯಿಂದ ಇನ್ನೊಂದು ದೀಪಾವಳಿಯವರೆಗೆ ಇರುತ್ತದೆ. ಹೊಸ ವರ್ಷದ ಲೆಕ್ಕದ ಖಾತೆ ಕಿರ್ದಿಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ. ವಾಸ್ತವದಲ್ಲಿ ಲಕ್ಷ್ಮೀ ಪೂಜೆಯ ಸಮಯ ದಲ್ಲಿ ಇಡೀ ವರ್ಷದ ಜಮಾಖರ್ಚನ್ನು ಕೊಡುವುದಿರುತ್ತದೆ. ಜಮೆ-ಖರ್ಚಿನ ಬಗ್ಗೆ ವರದಿಯನ್ನಿಟ್ಟು ಲಕ್ಷ್ಮೀಯ ಪೂಜೆ ಮಾಡುತ್ತಾರೆ.
ನಮ್ಮ ಜೀವನವು ಧನದಿಂದಾಗಿ ಸರಿಯಾಗಿ ನಡೆದಿರುತ್ತದೆ, ಆದುದರಿಂದ ಈ ಧನವನ್ನು ಪೂಜಿಸುತ್ತಾರೆ. ಇಲ್ಲಿ ‘ಧನ’ವೆಂದರೆ ಶುದ್ಧ ಲಕ್ಷ್ಮೀ. ಶ್ರೀಸೂಕ್ತದಲ್ಲಿ ವಸು, ಜಲ, ವಾಯು, ಅಗ್ನಿ ಮತ್ತು ಸೂರ್ಯ ಇವೆಲ್ಲವನ್ನು ಧನವೆಂದೇ ಪರಿಗಣಿಸಲಾಗಿದೆ. ಯಾವ ಧನಕ್ಕೆ ನಿಜವಾದ ಅರ್ಥವಿದೆಯೋ ಅವಳೇ ನಿಜವಾದ ಲಕ್ಷ್ಮೀ !
ಧನತ್ರಯೋದಶಿಯವರೆಗೆ ಬಾಕಿ ಉಳಿದ ಸಂಪತ್ತನ್ನು ಪ್ರಭುಕಾರ್ಯಕ್ಕಾಗಿ ಖರ್ಚು ಮಾಡಬೇಕು, ಸತ್‌ಕಾರ್ಯಕ್ಕಾಗಿ ಧನವು ಖರ್ಚು ಮಾಡಿದುದರಿಂದ ಧನಲಕ್ಷ್ಮಿಯು ಕೊನೆತನಕ ಲಕ್ಷ್ಮೀರೂಪದಲ್ಲಿ ಮನೆಯಲ್ಲಿ ಇರುತ್ತಾಳೆ.