ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಡಾ.ಕೆ.ಶಿವಚಿತ್ತಪ್ಪ ಕರೆ

ತುಮಕೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ವಿದ್ಯಾರ್ಥಿಗಳು ಆತ್ಮವಿಶ್ವಾಸ, ಕೌಶಲ್ಯ, ಶ್ರದ್ದೆ, ಸಮಯಪ್ರಜ್ಞೆ ಇತ್ಯಾದಿಗಳ ಮೂಲಕ ಯಶಸ್ಸುನ್ನು ಸಾಧಿಸಬಹುದು. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ಪಠ್ಯಕ್ರಮದ ಜೊತೆಗೆ ದೈಹಿಕ ಶಿಕ್ಷಣವು ಅಷ್ಟೇ ಪ್ರಮುಖವಾಗಿ ರುವುದರಿಂದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡರೆ ಮಾತ್ರ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಶಿಕ್ಷಣ ಎಂಬುದು ಮೌಲ್ಯಯುತವಾದ ಶಿಕ್ಷಣವಾಗಿದೆ ಶ್ರದ್ದೆಯಿಂದ ಕಲಿತರೇ ಯಶಸ್ಸು ಕಟ್ಟಿಟಬುತ್ತಿ ಎಂದು ತುಮಕೂರಿನ ವಿಶ್ವವಿದ್ಯಾಲಯದ ರಿಜಿಸ್ಟರ್‌ರಾದ ಡಾ.ಕೆ.ಶಿವಚಿತ್ತಪ್ಪರವರು ತಿಳಿಸಿದರು.

ನಗರದ ಶಿರಾ ರಸ್ತೆಯ ಶ್ರೀದೇವಿ ಪದವಿ ಕಾಲೇಜು ಮತ್ತು ಶ್ರೀದೇವಿ ಸ್ನಾತಕೋತ್ತರ ಕೇಂದ್ರದ ವತಿಯಿಂದ ಶ್ರೀಆಗಮನ ೨೦೨೧ ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನ.೧೮ ರಂದು ಬೆಳಿಗ್ಗೆ ೧೦ ಗಂಟೆಗೆ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಅಡಿಟೋರಿಯಂ ಸಭಾಂಗಣದಲ್ಲಿ ಕಾಲೇಜಿನ ಸ್ವಾಗತ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಇದೇ ಸಂದರ್ಭದಲ್ಲಿ ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್‌ರವರು ಮಾತನಾಡುತ್ತಾ ಪ್ರಸ್ತುತ ವಿದ್ಯಾರ್ಥಿ ತನ್ನ ವಿದ್ಯಾಭ್ಯಾಸದ ಸಂದರ್ಭದಲ್ಲಿಯೇ ತನ್ನ ಮುಂದಿನ ಭವಿಷ್ಯದ ಬಗ್ಗೆ ಕನಸನ್ನು ಕಂಡಾಗ ಅಂತಹ ವಿದ್ಯಾರ್ಥಿ ಯಶಸ್ಸನ್ನುಗಳಿಸುತ್ತಾನೆ. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ.ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಯಶಸ್ಸಿನ ಹಾದಿ ತಲುಪುತ್ತದೆ. ನಾವು ಬೆಳೆಯಬೇಕು ನಮ್ಮ ಜೊತೆಯಲ್ಲಿರುವವರನ್ನು ಬೆಳೆಸಬೇಕು, ಕಲಿಕೆ ಎಂಬುದು ನಿರಂತರವಾಗಿರುವುದು ಎಂದು ತಿಳಿಸಿದರು.


ಈ ಕಾರ್ಯಕ್ರಮದಲ್ಲಿ ಶ್ರೀದೇವಿ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಎಂ.ಆರ್.ಹುಲಿನಾಯ್ಕರ್ ಹಾಗೂ ಶ್ರೀದೇವಿ ವೈದ್ಯಕೀಯ ನಿರ್ದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್‌ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಮುಬಾರಕ್‌ರವರು ೨೦೨೦-೨೧ ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿ ಮಾತನಾಡಿತ್ತಾ ಪ್ರಸ್ತುತ ವಿದ್ಯಾರ್ಥಿ ತನ್ನ ವಿದ್ಯಾಭ್ಯಾಸದ ಸಂದರ್ಭದಲ್ಲಿಯೇ ತನ್ನ ಮುಂದಿನ ಭವಿಷ್ಯದ ಬಗ್ಗೆ ಕನಸನ್ನು ಕಂಡಾಗ ಅಂತಹ ವಿದ್ಯಾರ್ಥಿ ಯಶಸ್ಸನ್ನುಗಳಿಸುತ್ತಾನೆ. ವಿದ್ಯಾರ್ಥಿಗಳಿಗೆ ಸಮಯಪಾಲನೆ, ವಿದ್ಯಾರ್ಥಿ ಗಳ ಜವಾಬ್ದಾರಿ, ನೈಪುಣ್ಯತೆ, ಜೀವನದ ಮುಂದಿನ ಸವಾಲುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ಹಾಗೂ ಜೀವನ ದಲ್ಲಿ ಆಳವಡಿಸಿಕೊಳ್ಳಬೇಕೆಂದು ತಿಳಿಸಿದರು. ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಎಕ್ಸಲೆನ್ಸ್ ಅವಾರ್ಡ್ಸ್ ೨೦೨೧ ಬೆಸ್ಟ್ ಪದವಿ ಪ್ರಾಂಶುಪಾಲರಾದ ಮುಬಾರಕ್‌ರನ್ನು ಶ್ರೀದೇವಿ ಆಡಳಿತ ಮಂಡಳಿ ಮತ್ತು ಕಾಲೇಜಿನ ಬೋಧಕ ಸಿಬ್ಬಂದಿ ವರ್ಗದವರು ಅಭಿನಂದನೆಯನ್ನು ಸಲ್ಲಿಸಲಾಯಿತ್ತು.
ಕಾರ್ಯಕ್ರಮದಲ್ಲಿ ಶ್ರೀದೇವಿ ಕಾಲೇಜಿನ ಆಡಳಿತಾಧಿಕಾರಿಯಾದ ಟಿ.ವಿ.ಬ್ರಹ್ಮದೇವಯ್ಯರವರು ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಹೆಚ್ಚು ಶ್ರಮ ವಹಿಸಿ, ಅತ್ಯುತ್ತಮ ಶ್ರೇಣಿಯ ರೀತಿಯಲ್ಲಿ ಮುಂಬರುವ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಶಿಕ್ಷಣ ಸಂಸ್ಥೆಯೂ ಎಲ್ಲ ಅನುಕೂಲತೆಗಳನ್ನು ಕಲ್ಪಿಸುತ್ತಿದೆ. ಇವುಗಳನ್ನು ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಪ್ರೊ. ಚಂದ್ರಿಕಾ, ಪ್ರೊ. ಅಷಿಯಾಭಾನು, ಪ್ರೊ.ಬಾಸ್ಕರ್, ಪ್ರೊ.ವತ್ಸಲ, ಪ್ರೊ. ಸಾರೀಯ ಖಾನಂ, ಪ್ರೊ. ರಾಘವೇಂದ್ರ ಜಟ್ಟಣ, ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!