ತುಮಕೂರು : ವಿದ್ಯಾರ್ಥಿಗಳು ಪಠ್ಯಕ್ರಮಗಳೊಂದಿಗೆ ಅಗತ್ಯವಿರುವ ಕೌಶಲ್ಯದ ನೈಪುಣ್ಯತೆ, ಉದ್ಯೋಗಾಂಕ್ಷಿಯ ಕೌಶಲ್ಯದ ವ್ಯಕ್ತಿತ್ವ ಡೆವಲಪ್‌ಮೆಂಡ್ ಕೌಶಲ್ಯ ಮತ್ತು ಸಂವಹನ ಕೌಶಲ್ಯಗಳ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಾಗಾರವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಬೆಂಗಳೂರಿನ ನಟರು ಹಾಗೂ ಸಾಮಾಜಿಕ ಮಾಧ್ಯಮ ಪ್ರಭಾವಿಯಾದ ಪ್ರದೀಪ್ ದೊಡ್ಡಯ್ಯರವರು ತಿಳಿಸಿದರು.
ನಗರದ ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ವತಿಯಿಂದ ಓರಿಯೇಟೇಷನ್ ಕಾರ್ಯಾಗಾರವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ ಅವರು ಬದುಕಿನಲ್ಲಿ ಭರವಸೆ ಇದ್ದರೆ, ಭವ್ಯ ಭವಿಷ್ಯವನ್ನು ರೂಪಿಸುವ ದಾರಿ ಅವರಿಗೆ ಕಾಣಿಸುತ್ತದೆ. ಜೀವನದಲ್ಲಿ ಉತ್ಸಾಹವಿದ್ದರೆ ಕನಸನ್ನು ನನಸಾಗಿಸುವ ಬಾಗಿಲು ತಾನಾಗಿಯೇ ತೆರೆಯುತ್ತದೆ. ನಮ್ಮ ಭವಿಷ್ಯವನ್ನು ನೀವೇ ಉತ್ತಮಪಡಿಸಿಕೊಂಡು ಆತ್ಮಸ್ಥೈರ್ಯದಿಂದ ತಮ್ಮ ಮುಂದಿನ ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್‌ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದರು. ಇದೇ ಸಂದರ್ಭದಲ್ಲಿ ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಪ್ರೊ.ಮುಭಾರಕ್‌ರವರು ಮಾತನಾಡುತ್ತಾ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸ ಬೇಕಾದ ಕೆಲಸವನ್ನು ಶಿಕ್ಷಕರು ಮಾಡಬೇಕು, ಹಾಗೂ ಜಗತ್ತಿನ ಎಲ್ಲ ವ್ಯವಹಾರಗಳಿಗೂ ವಾಣಿಜ್ಯದಿಂದ ಸಾಧ್ಯವಾಗುವುದು, ಬದುಕಿನ ಎಲ್ಲಾ ವಿಷಯಗಳಲ್ಲಿಯೂ ಸಂವಹನ ಕೌಶಲ್ಯ ಅಗತ್ಯವಾಗಿದೆ ಮತ್ತು ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶ ಹೊಂದುತ್ತಿದ್ದು, ಕೌಶಲ್ಯ ಮತ್ತು ಸಂವಹನ ಕೌಶಲ್ಯಗಳ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ಸಾಕಷ್ಟು ಮೌಲ್ಯಧಾರಿತ ಅಗತ್ಯವಾದ ವಿಷಯಗಳನ್ನು ಹಾಗೂ ವಾಣಿಜ್ಯ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಉತ್ತೇಜನ ನೀಡಲಾಗುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರೊ. ಚಂದ್ರಿಕಾ, ಪ್ರೊ. ಅಷಿಯಾಭಾನು, ಪ್ರೊ.ವತ್ಸಲ, ಪ್ರೊ.ಮೇಘಾ, ಪ್ರೊ. ರಾಘವೇಂದ್ರ ಜಟ್ಟಣ, ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.