ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಇ-ಕಾಮರ್ಸ್ ಕಾರ್ಯಾಗಾರ

ತುಮಕೂರು : ವಿದ್ಯಾರ್ಥಿಗಳು ಪಠ್ಯಕ್ರಮಗಳೊಂದಿಗೆ ಅಗತ್ಯವಿರುವ ಕೌಶಲ್ಯದ ನೈಪುಣ್ಯತೆ, ಉದ್ಯೋಗಾಂಕ್ಷಿಯ ಕೌಶಲ್ಯದ ವ್ಯಕ್ತಿತ್ವ ಡೆವಲಪ್‌ಮೆಂಡ್ ಕೌಶಲ್ಯ ಮತ್ತು ಸಂವಹನ ಕೌಶಲ್ಯಗಳ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಹಾಗೂ ಇ- ಕಾಮರ್ಸ್‌ನಲ್ಲಿ ವೃತ್ತಿಯನ್ನು ಏಕೆ ನಿರ್ಮಿಸಬೇಕು, ಅದರ ಉಪಯೋಗಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ವಿದ್ಯಾರ್ಥಿಗಳಿಗೆ ಹಲವಾರು ಕಾರ್ಯಕ್ರಮಗಳ ಮೂಲಕ ಅತ್ಯುತ್ತಮ ವೇದಿಕೆಯನ್ನು ಕಲ್ಪಿಸಲಾಗಿದೆ. ಇತಂಹ ಜ್ಞಾನವನ್ನು ವಿದ್ಯಾರ್ಥಿಗಳು ಸದುಪಯೋಗವನ್ನು ಪಡೆದುಕೊಳ್ಳಬೇಕು. ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಪ್ರೊ.ಮುಭಾರಕ್‌ರವರು ತಿಳಿಸಿದರು. ನಗರದ ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ವತಿಯಿಂದ ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಇ-ಕಾಮರ್ಸ್ ಕಾರ್ಯಾಗಾರವನ್ನು ಇತ್ತೀಚಿಗೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಇದೇ ಸಂದರ್ಭದಲ್ಲಿ ದೆಹಲಿಯ ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಇ-ಕಾಮರ್ಸ್ ನಿರ್ದೇಶಕರಾದ ಸುಮೀತ್ ಪರೀಕ್‌ರವರು ಮಾತನಾಡುತ್ತಾ ಬಹು ಅಂತರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ಪಡೆಯುವುದು ಹೇಗೆ, ಸ್ವಯಂ ಉದ್ಯೋಗ ಪ್ರಾರಂಭಿಸುವುದು ಹೇಗೆ, ಇ-ಕಾಮರ್ಸ್‌ನಲ್ಲಿ ಸ್ವತಂತ್ರ ಅವಕಾಶಗಳನ್ನು ಹೇಗೆ ಕಲ್ಪಿಸಿಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡುತ್ತಾ, ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕಾಲೇಜಿನ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಇ-ಕಾಮರ್ಸ್‌ನ ಮುಖೇನ ವಿಶೇಷ ತರಗತಿಗಳನ್ನು ಕೊಡುವ ಮೂಲಕ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್‌ರವರು ಕಾರ್ಯಾಗಾರಕ್ಕೆ ಶುಭ ಹಾರೈಸಿದ್ದರು. ಇದೇ ಸಂದರ್ಭದಲ್ಲಿ ಪ್ರಾದೇಶಿಕ ಮುಖ್ಯಸ್ಥರಾದ ಶ್ರೀಕಾಂತ್‌ರವರು ಮಾತನಾಡುತ್ತಾ ಇ-ಕಾಮರ್ಸ್‌ನ ಬಗ್ಗೆ ಸ್ವವಿವರವಾಗಿ ವಿವರಿಸಿದ್ದರು. ಇದೇ ಸಂದರ್ಭದಲ್ಲಿ ಪ್ರೊ. ಚಂದ್ರಿಕಾ, ಪ್ರೊ. ಅಷಿಯಾಭಾನು, ಪ್ರೊ.ವತ್ಸಲ, ಪ್ರೊ.ಮೇಘಾ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!