ವೈದ್ಯರು ರೋಗಿಗಳಿಗೆ ಉತ್ತಮವಾದ ರೀತಿಯಲ್ಲಿ ಚಿಕಿತ್ಸೆಯನ್ನು ನೀಡಬೇಕು, ಇತ್ತೀಚಿನ ದಿನಗಳಲ್ಲಿ ವೈದ್ಯರಿಗೆ ಬೇಡಿಕೆ ಹೆಚ್ಚಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳು ತಪಸ್ವಿನಂತೆ ಶ್ರದ್ಧೆ, ನಿಷ್ಟೆಯಿಂದ ಕಲಿತರೆ ಉಜ್ವಲವಾದ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಾಯವಾಗುತ್ತದೆ. ರಾತ್ರಿ, ಹಗಲು ಎನ್ನದೇ ಯಾವುದೇ ಸಮಯವಾದರೂ ರೋಗಿಗಳ ಚಿಕಿತ್ಸೆಗೆ ಸದಾ ಸಿದ್ದರಿರಬೇಕು ಮತ್ತು ಯಾವಾಗಲೂ ರೋಗಿಗಳನ್ನು ಸೇವಾ ಮನೋಭಾವದಿಂದ ನೋಡಬೇಕು. ರೋಗಿ ಮತ್ತು ವೈದ್ಯರ ಭಾಂದವ್ಯ ಚೆನ್ನಾಗಿದ್ದರೆ ಮತ್ತು ರೋಗಿಯೂ ಬೇಗ ಗುಣಮುಖರಾಗುತ್ತಾರೆ ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಎಂ.ಆರ್. ಹುಲಿನಾಯ್ಕರ್‌ರವರು ಕಿವಿ ಮಾತು ಹೇಳಿದರು.
ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ವತಿಯಿಂದ 2021-22 ನೇ ಸಾಲಿನ ಪ್ರಥಮ ವರ್ಷದ ನೂತನ ಎಂ.ಬಿ.ಬಿ.ಎಸ್. ಪದವಿ, ಎಂ.ಡಿ. ಮತ್ತು ಎಂ.ಎಸ್ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ ಸಮಾರಂಭವನ್ನು ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಏ.4 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಮುಖ್ಯಅತಿಥಿಗಳಾಗಿ ಬೆಂಗಳೂರಿನ ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಡಾ.ಎಂ.ದಯಾನAದ್‌ರವರು ಮಾತನಾಡುತ್ತಾ ವೈದ್ಯಕೀಯ ವೃತ್ತಿಯೂ ಜಗತ್ತಿನಾದ್ಯಂತ ತಲೆ ಎತ್ತಿನೋಡುತ್ತಾ ಮಹತ್ತರವಾದ ವೃತ್ತಿಯೆಂದು ಭಾವಿಸಲಾಗುತ್ತದೆ ಇದರ ಪೂರ್ವಭಾವಿ ಸಿದ್ದತೆಯಾಗಿ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಅವಧಿಯಲ್ಲಿ ಸಮಯ ಪರಿಪಾಲನೆ, ಕಾರ್ಯತತ್ಪರತೆ ಮತ್ತು ಜನರ ನೋವಿಗೆ ಸ್ಪಂದಿಸುವ ಮನೋಭಾವನೆಯನ್ನು ಬೆಳೆಸಿಕೊಂಡು ಒಂದು ಉತ್ತಮ ಆರೋಗ್ಯಕರವಾದ ಸಮಾಜದ ಕಲ್ಪನೆಯನ್ನು ಸಾಕಾರಗೊಳಿಸಬಹುದು ಎಂದು ತಿಳಿಸಿದರು.
ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕರಾದ ಡಾ. ರಮಣ್ ಎಂ. ಹುಲಿನಾಯ್ಕರ್‌ರವರು ಮಾತನಾಡುತ್ತಾ ಓರಿಯಂಟೇಷನ್ ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಪದವಿ ಕೋರ್ಸಿನ ಅವಧಿ ಮತ್ತು ಸಮಯದ ಬಗ್ಗೆ ರೂಪರೇಷೆಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳ ಬೇಕು. ಗುರುವಿನಲ್ಲಿ ಭಕ್ತಿಯಿಟ್ಟು ವಿದ್ಯಾಭ್ಯಾಸ ಮಾಡಿದರೆ, ಪ್ರತಿಭಾವಂತ ವಿದ್ಯಾರ್ಥಿಗಳಾಗಿ ಹೊರಹೊಮ್ಮಬಹುದು ಹಾಗೂ ಸ್ನಾತಕೋತ್ತರ ಪದವಿಗೆ ಉತ್ತಮ ಭವಿಷ್ಯವಿದೆ ಎಂದು ತಿಳಿಸಿದರು. ಹಾಗೂ ಪ್ರಥಮ ವರ್ಷದ ನೂತನ ಎಂ.ಬಿ.ಬಿ.ಎಸ್., ಎಂ.ಡಿ. ಮತ್ತು ಎಂ.ಎಸ್. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್‌ರವರು ಮಾತನಾಡುತ್ತಾ ವೈದ್ಯಕೀಯ ಕ್ಷೇತ್ರ ಎಂಬುದು ಅತ್ತುತ್ಯಮವಾದ ಕ್ಷೇತ್ರವಾಗಿದೆ. ಎಂ.ಬಿ.ಬಿ.ಎಸ್. ವರ್ಷಗಳಲ್ಲಿ ಪ್ರಾಯೋಗಿಕವಾಗಿ ವ್ಯಾಸಂಗ ಮಾಡಿದ ವಿಷಯಗಳು ವೃತ್ತಿ ಬದುಕಿಗೆ ಬುನಾದಿಯಾಗಲಿದೆ ಎಂದು ತಿಳಿಸಿದರು. ಶ್ರೀದೇವಿ ಸಂಸ್ಥೆಯೂ ಬೆಳೆದು ಬಂದ ದಾರಿ ಹಾಗೂ ಟ್ರಸ್ಟ್ ವತಿಯಿಂದ ನಿರ್ವಹಿಸುತ್ತಿರುವ ವಿವಿಧ ಶ್ರೀದೇವಿ ಶಿಕ್ಷಣ ಸಂಸ್ಥೆಯ ವಿವರಗಳನ್ನು ನೀಡುತ್ತಾ ಶಿಕ್ಷಣದ ಕ್ಷೇತ್ರದಲ್ಲಿ ಮತ್ತು ಆರೋಗ್ಯ ಸೇವೆಗಳಲ್ಲಿ ತುಮಕೂರಿನಲ್ಲಿ ಶ್ರೀದೇವಿ ಸಂಸ್ಥೆಯೂ ತನ್ನದೇ ಆದ ವಿಶಿಷ್ಟ ಮಹತ್ವವನ್ನು ಹೊಂದಿರುತ್ತದೆ. ಸಂಸ್ಥೆಯಲ್ಲಿ ವ್ಯಾಸಂಗ ಮಾಡಿ ತೇರ್ಗೆಡೆಯಾದ ವಿದ್ಯಾರ್ಥಿಗಳು ಪ್ರಪಂಚದ ವಿವಿಧ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರತಿ ವರ್ಷ ವಿಶ್ವವಿದ್ಯಾಲಯ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳ ರ‍್ಯಾಂಕ್‌ಗಳನ್ನು ಪಡೆದು ಅತ್ಯುತ್ತಮ ಶ್ರೇಣಿಗಳಲ್ಲಿ ತೇರ್ಗಡೆ ಹೊಂದಿದ್ದು ಶ್ರೀದೇವಿ ಸಂಸ್ಥೆಗೆ ಗೌರವ ತಂದಿದ್ದಾರೆ ಎಂದರು.
ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಡಿ.ಕೆ.ಮಹಾಬಲರಾಜುರವರು ಮಾತನಾಡುತ್ತಾ ಪ್ರಾರಂಭಿಕ ಸ್ನಾತಕೋತ್ತರ ಪದವಿ ವೈದ್ಯಕೀಯ ವಿದ್ಯಾರ್ಥಿಗಳು ಅನುಸರಿಸಬೇಕಾದ ನೀತಿ, ನಿಯಮಗಳನ್ನು ಮನವರಿಕೆ ಮಾಡಿಕೊಟ್ಟರು. ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಅಡಿಯಲ್ಲಿ ಅನುಸರಿಸಬೇಕಾದ ಪಠ್ಯಕ್ರಮ ಹಾಗೂ ಕಡ್ಡಾಯವಾಗಿ ಹಾಜರಾತಿಯಿಂದ ಆಗುವ ಉಪಯೋಗಗಳನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಉಪಪ್ರಾಂಶುಪಾಲರಾದ ಡಾ.ರೇಖಾಗುರುಮೂರ್ತಿ, ಶ್ರೀದೇವಿ ಆಸ್ಪತ್ರೆಯ ನೇತ್ರತಜ್ಞರಾದ ಡಾ.ಲಾವಣ್ಯ, ಅನಾಟಮಿ ವಿಭಾಗದ ಮುಖ್ಯಸ್ಥರಾದ ಡಾ.ಡಿ.ಅನುಪಮ, ಶ್ರೀದೇವಿ ಚಾರಿಟಬಲ್ ಟ್ರಸ್ಟ್ನ ಅಂಬಿಕಾ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.