ತುಮಕೂರು: ಇಂದಿನ ವಿದ್ಯಾರ್ಥಿಗಳಿಗೆ ಅರ್ಥಶಾಸ್ತ್ರದ ಸಂಖ್ಯಾಶಾಸ್ತ್ರದ ತಾಂತ್ರಿಕ ಬೆಲೆ, ಏರಿಕೆ, ಮತ್ತು ನಿರ್ಗದಿತ ಬೆಲೆ, ತೆರಿಗೆ, ಮಾರುಕಟ್ಟೆ ಪ್ರಕ್ರಿಯೆ, ವಿನಿಮಯ ಮುಂತಾದ ಅರ್ಥಶಾಸ್ತ್ರದ ವಿಸ್ತಾರದ ಜ್ಞಾನ ಬಗ್ಗೆ ಕುಣಿಗಲ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ನರಸಿಂಹನ್‌ರವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ನಗರದ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ. ವಿಭಾಗದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ವಿವಿಧ ಮಾರುಕಟ್ಟೆಗಳ ರಚನೆಗಳ ಅಡಿಯಲ್ಲಿ ಬೆಲೆ ಮತ್ತು ತಂತ್ರಗಳ ಬಗ್ಗೆ ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀದೇವಿ ಎಂ.ಬಿ.ಎ. ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಸ್.ರಾಮಕೃಷ್ಣರವರು ಮಾತನಾಡುತ್ತಾ ಎಂ.ಬಿ.ಎ.ಪದವೀಧರರಿಗೆ ಉದ್ಯೋಗ ಮಾರುಕಟ್ಟೆಯಲ್ಲಿ ಹೆಚ್ಚು ಅವಕಾಶಗಳಿವೆ. ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮಕ್ಕೆ ಹೆಚ್ಚುವರಿಯಾಗಿ ತಮ್ಮ ಕೌಶಲ್ಯವನ್ನು ಸುಧಾರಿಸಲು ಇಂತಹ ಉಪನ್ಯಾಸ ಕಾರ್ಯಕ್ರಮಗಳು ನಡೆಯಬೇಕು ಎಂದು ತಿಳಿಸಿದರು. ಹಾಗೂ ಶ್ರೀದೇವಿ ಸಂಸ್ಥೆಯೂ ಇಂತಹ ಹಲವಾರು ಕಾರ್ಯಕ್ರಮಗಳ ಮೂಲಕ ತನ್ನ ವಿದ್ಯಾರ್ಥಿಗಳ ಅಭಿವೃದ್ಧಿಗೆ ಶ್ರಮಿಸಲಿದೆ ಎಂದು ತಿಳಿಸಿದರು. ಈ ಕಾರ್ಯಾಗಾರಕ್ಕೆ ಶ್ರೀದೇವಿ ಛಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಎಂ.ಆರ್.ಹುಲಿನಾಯ್ಕರ್ ಹಾಗೂ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್‌ರವರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪ್ರೊ.ಬಿ.ಎನ್.ಪ್ರತಾಪ್, ಪ್ರೊ.ಗ್ರೇಸ್ ಹೇಮಲತಾ, ಪ್ರೊ.ಟಿ.ಎಂ.ಪ್ರವೀಣ್‌ಕುಮಾರ್, ಪ್ರೊ. ಅಮುತಲ್ ನಸೀಭ್, ಪ್ರೊ.ಶ್ರೀಚರಣ್ ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.