ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಅಗತ್ಯ : ಡಾ.ಎಂ.ವೆAಕಟೇಶ್ವರಲು

ತುಮಕೂರು:
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ವಿದ್ಯಾರ್ಥಿಗಳು ಆತ್ಮವಿಶ್ವಾಸ, ಕೌಶಲ್ಯ, ಶ್ರದ್ದೆ, ಸಮಯಪ್ರಜ್ಞೆ ಇತ್ಯಾದಿಗಳ ಮೂಲಕ ಯಶಸ್ಸುನ್ನು ಸಾಧಿಸಬಹುದು. ಉತ್ತಮ ಫಲಿತಾಂಶ ಪಡೆದವರು ಉದ್ಯೋಗವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಹೆಚ್ಚು ಶ್ರಮ ವಹಿಸಬೇಕು. ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಮುಂಬರುವ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬಹುದು ಎಂದು ತುಮಕೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಎಂ.ವೆAಕಟೇಶ್ವರಲುರವರು ತಿಳಿಸಿದರು.


ನಗರದ ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಿದ್ದ ಶ್ರೀ ಸೃಷ್ಟಿ-2022 ವಾರ್ಷಿಕೋತ್ಸವ ಸಮಾರಂಭವನ್ನು ಆ.19 ರಂದು ಶ್ರೀದೇವಿ ಆಸ್ಪತ್ರೆಯ ಅಡಿಟೋರಿಯಂ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್. ಹುಲಿನಾಯ್ಕರ್‌ರವರು ಮಾತನಾಡುತ್ತಾ ವಿದ್ಯಾರ್ಥಿ ತನ್ನ ವಿದ್ಯಾಭ್ಯಾಸದ ಸಂದರ್ಭದಲ್ಲಿಯೇ ತನ್ನ ಮುಂದಿನ ಭವಿಷ್ಯದ ಬಗ್ಗೆ ಕನಸನ್ನು ಕಂಡಾಗ ಅಂತಹ ವಿದ್ಯಾರ್ಥಿ ಯಶಸ್ಸನ್ನುಗಳಿಸುತ್ತಾನೆ. ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಯಶಸ್ಸಿನ ಹಾದಿ ತಲುಪುತ್ತದೆ. ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಉತ್ತಮ ಗುರಿಮುಟ್ಟಲ್ಲೂ ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಬೆಂಗಳೂರಿನ ಸಾಧನಾ ಗ್ರೂಪ್ಸ್ ಆಫ್ ಐ.ಎ.ಎಸ್. ಸಂಸ್ಥೆಯ ನಿರ್ದೇಶಕಿಯಾದ ಡಾ.ಕೆ.ಸಿ.ಜ್ಯೋತಿರವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಸಮಯಪಾಲನೆ, ವಿದ್ಯಾರ್ಥಿಗಳ ಜವಾಬ್ದಾರಿ, ನೈಪುಣ್ಯತೆ, ಜೀವನದ ಮುಂದಿನ ಸವಾಲುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ಹಾಗೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಹಾಗೂ ವಿದ್ಯಾರ್ಥಿಗಳು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಆಗ ಮಾತ್ರ ನಾವು ಹುಟ್ಟಿರುವುದಕ್ಕೆ ಸಾರ್ಥಕವಾಗುತ್ತದೆ. ತಂದೆ-ತಾಯಿಯವರಿಗೆ ಮತ್ತು ವಿದ್ಯಾಭ್ಯಾಸ ಮಾಡಿದ ಕಾಲೇಜಿಗೆ ಒಳ್ಳೆಯ ಹೆಸರು ತರಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಶ್ರೀದೇವಿ ವೈದ್ಯಕೀಯ ನಿರ್ದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್‌ರವರು ಮಾತನಾಡುತ್ತಾ ವಿದ್ಯಾರ್ಥಿಗಳು ಪಡೆದಂತಹ ಪದವಿಯು ಉತ್ತಮವಾದ ರೀತಿಯಲ್ಲಿ ಕೌಶಲ್ಯಜ್ಞಾನ ಉತ್ತಮವಾಗಿರುತ್ತದೆ ಕಾಲೇಜಿನ ಸಮಯದಲ್ಲಿಯೇ ಕಾಲೇಜು ಶಿಕ್ಷಣದ ಜೊತೆ ಜೊತೆಯಲ್ಲಿಯೇ ಜೀವನ ಕೌಶಲ್ಯಗಳ ತರಬೇತಿಯನ್ನು ನೀಡುವುದು ವಿದ್ಯಾರ್ಥಿಗಳಿಗೆ ಸಹಾಯಕವಾಗುತ್ತದೆ ಎಂದು ತಿಳಿಸಿದರು.
ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲರಾದ ಪ್ರೊ.ಮುಭಾರಕ್‌ರವರು ಈ ಸಾಲಿನ 2021-22 ವಾರ್ಷಿಕ ವರದಿಯನ್ನು ಮಂಡಿಸಿ ಮಾತನಾಡುತ್ತಾ ನಮ್ಮ ವಿದ್ಯಾಸಂಸ್ಥೆಯಲ್ಲಿ ಸುಮಾರು 400 ಕ್ಕೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.


ಶ್ರೀದೇವಿ ಕಾಲೇಜಿನ ಆಡಳಿತಾಧಿಕಾರಿಯಾದ ಪ್ರೊ.ಟಿ.ವಿ.ಬ್ರಹ್ಮದೇವಯ್ಯರವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದರು. ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಎಂ.ವೆAಕಟೇಶ್ವರಲು ಹಾಗೂ ಬೆಂಗಳೂರಿನ ಸಾಧನಾ ಗ್ರೂಪ್ಸ್ ಆಫ್ ಐ.ಎ.ಎಸ್.ಸಂಸ್ಥೆಯ ನಿರ್ದೇಶಕಿಯಾದ ಡಾ.ಕೆ.ಸಿ.ಜ್ಯೋತಿರವರಿಗೆ ಸನ್ಮಾನಿಸಲಾಗಿತ್ತು. ಇದೇ ಸಂದರ್ಭದಲ್ಲಿ ಪ್ರೊ. ಚಂದ್ರಿಕಾ, ಪ್ರೊ. ಅಷಿಯಾಭಾನು, ಪ್ರೊ.ವತ್ಸಲ, ಪ್ರೊ.ಮೇಘಾ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!