ತುಮಕೂರು_ಮುಂಬರುವ 2023 ಚುನಾವಣೆಗೆ ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ನಾನೇ ಎಂದು ತುಮಕೂರು ಜೆಡಿಎಸ್ ಅಭ್ಯರ್ಥಿ ಎನ್ ಗೋವಿಂದರಾಜು ತಿಳಿಸಿದ್ದಾರೆ.
ತುಮಕೂರಿನ ಖಾಸಗಿ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಕಳೆದ ಚುನಾವಣೆಯಲ್ಲಿ ಐವತ್ತೈದು ಸಾವಿರ ಮತ ಪಡೆದು ಸೋತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಜನತಾ ಜಲಧಾರೆ ನಡೆದ ಕಾರ್ಯಕ್ರಮದ ಸಮಯದಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ ಎಂದರು.
ಇನ್ನು ಮುಂಬರುವ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಹಲವರು ಆಕಾಂಕ್ಷಿಗಳಿದ್ದಾರೆ, ಅದರಲ್ಲಿ ತಪ್ಪೇನಿಲ್ಲ ಆದರೆ ಮುಂಬರುವ ಚುನಾವಣೆಗೆ ತುಮಕೂರು ವಿಧಾನಸಭಾ ಕ್ಷೇತ್ರಕ್ಕೆ ತಮಗೆ ಟಿಕೆಟ್ ನೀಡುವ ಬಗ್ಗೆ ಈಗಾಗಲೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರು ಸ್ಪಷ್ಟಪಡಿಸಿದ್ದಾರೆ ಎಂದಿದ್ದಾರೆ ಅದರಂತೆ ನಾನು ಪಕ್ಷದಲ್ಲಿ ಸಕ್ರೀಯನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಇನ್ನು ಕಳೆದ ಬಾರಿಯ ಚುನಾವಣೆಯಲ್ಲಿ ತುಮಕೂರು ವಿಧಾನಸಭಾ ಕ್ಷೇತ್ರದಿಂದ 55,000 ಮತವನ್ನ ಪಡೆದಿದ್ದು ಅದರ ಆಧಾರದ ಮೇಲೆ ಮತ್ತೊಂದು ಬಾರಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದೇನೆ ಎಂದಿದ್ದಾರೆ.
ಇನ್ನು ತುಮಕೂರು ಜಿಲ್ಲೆಗೆ ಪಂಚರತ್ನ ಯಾತ್ರೆ, ನವಂಬರ್ 14ರಂದು ಜಿಲ್ಲೆಗೆ ಆಗಮಿಸಲಿದ್ದು ಆ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ,ಸಿ.ಎಂ ಇಬ್ರಾಹಿಂ ಸೇರಿದಂತೆ ಜಿಲ್ಲೆಯ ಎಲ್ಲಾ ನಾಯಕರು ಕಾರ್ಯಕರ್ತರು ಹಾಜರಿರಲಿದ್ದಾರೆ ಎಂದಿದ್ದಾರೆ.