ತುಮಕೂರು: ಹೊಸಪೇಟೆಯಲ್ಲಿ ನಡೆದ ಕ್ರಾಂತಿ ಚಲನಚಿತ್ರದ ಧ್ವನಿಸುರುಳಿ ಸಂದರ್ಭದಲ್ಲಿ ನಟ ತೂಗುದೀಪ ದರ್ಶನ್ ಮೇಲೆ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ತುಮಕೂರು ಜಿಲ್ಲಾ ದರ್ಶನ್ ಅಭಿಮಾನಿಗಳ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡಿ ಆರೋಪಿಯನ್ನ ಬಂಧಿಸಿ ಗಡಿಪಾರು ಮಾಡಬೇಕು ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಚಪ್ಪಲಿ ಎಸೆದ ಆರೋಪಿಯನ್ನ ಶೀಘ್ರವೇ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಕೂಡಲೇ ಆರೋಪಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ತಹಸಿಲ್ದಾರ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಇದೆ ಸಂದರ್ಭದಲ್ಲಿ ಮಾತನಾಡಿದ ತುಮಕೂರು ಜಿಲ್ಲಾ ದರ್ಶನ ಅಭಿಮಾನಿಗಳ ಸಂಘದ ಗಿರೀಶ್ ಮಾತನಾಡಿ ದರ್ಶನ್ ರವರ ಮೇಲೆ ಚಪ್ಪಲಿ ಎಸೆದ ಆರೋಪಿಯನ್ನ ಬಂಧಿಸಬೇಕು ಇದರಿಂದ ದರ್ಶನ ಅಭಿಮಾನಿಗಳ ಮನಸ್ಸಿಗೆ ತೀವ್ರ ನೋವುಂಟು ತಂದಿದ್ದು ಶೀಘ್ರವೇ ಆರೋಪಿಯ ಬಂಧನವಾಗಬೇಕು ಇಲ್ಲವಾದಲ್ಲಿ ರಾಜ್ಯದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು.