ಜ್ಞಾನ ಚೈತನ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತುಮಕೂರಿನ ಡಾ. ಯೋಗೀಶ್ ಡಿ.ಪಿ. ಅವರಿಗೆ ‘ವಿದ್ಯಾಭೂಷಣ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ನ ಶ್ರೀ ಕೃಷ್ಣರಾಜ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ಅವರು ನಿರಂತರವಾಗಿ ಸಲ್ಲಿಸುತ್ತಿರುವ ಗಣನೀಯ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ನೀಡುತ್ತಿರುವ ಕೊಡುಗೆಯನ್ನು ಟ್ರಸ್ಟ್ ವಿಶೇಷವಾಗಿ ಪರಿಗಣಿಸಿದೆ.
