ರಾಷ್ಟ್ರೀಯ ಪಕ್ಷಿಯನ್ನು ಕೊಂದು ತಿನ್ನುತ್ತಿದ್ದವರನ್ನು ಬಂಧಿಸಿದ ತುಮಕೂರು ಅರಣ್ಯ ಇಲಾಖೆ

ತುಮಕೂರು: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಷ್ಟ್ರಪಕ್ಷಿ ನವಿಲು ಮಾಂಸ (Peacock meat) ಭಕ್ಷಣೆ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ ಈ ಘಟನೆಯು ತುಮಕೂರು ತಾಲ್ಲೂಕಿನ ಮಾರನಾಯಕನಪಾಳ್ಯದಲ್ಲಿ ಘಟನೆ ನಡೆದಿದೆ.

 

 

 

 

 

ಬೆಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್  ಎಂಬುವವರು ಬಂಧಿತ ಆರೋಪಿಗಳಾಗಿದ್ದು, ಇವರೆಲ್ಲರೂ ಸಹ ಉತ್ತರ ಭಾರತ ಮೂಲದ ಒರಿಸ್ಸಾ  ರಾಜ್ಯದವರು ಎನ್ನಲಾಗಿದೆ.  ಇವರುಗಳು ಮಾರನಾಯಕನಪಾಳ್ಯದಲ್ಲಿರುವ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಇವರುಗಳು ನವಿಲು ಮಾಂಸದ ರುಚಿಗೆ ಬಿದ್ದಿದ್ದರು ಎನ್ನಲಾಗಿದೆ.

 

 

 

 

ಇನ್ನು ಈ ಭಾಗದಲ್ಲಿ ನವಿಲುಗಳು ಹೆಚ್ಚಾಗಿರುವುದರಿಂದ ಇವರುಗಳ ಕೈಗೆ ಬಲು ಸುಲಭವಾಗಿ ಸಿಗುತ್ತಿತ್ತು ಎನ್ನಲಾಗಿದೆ. ಕಳೆದ ಹಲವು ದಿನಗಳಿಂದ ನವಿಲುಗಳನ್ನು ಕೊಂದು ತಿನ್ನುತ್ತಿದ್ದ ಖಚಿತ ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ ಹಾಗೂ ನವಿಲು ಹಿಡಿಯಲು ಬಳಸುತ್ತಿದ್ದ ಬಲೆಗಳು, ಉರುಳುಗಳು, ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆದ ಮಾಂಸವನ್ನು ಅರಣ್ಯಾಧಿಕಾರಿಗಳು ಎಫ್ಎಸ್ಎಲ್‌ಗೆ ಕಳುಹಿಸಿದ್ದಾರೆ. ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!