ಲೋಕೇಶ್ ತಾಳಿಕಟ್ಟೆಗೆ ಬೆಂಬಲ ಘೋಷಿಸಿದ ಕೋಲಾರ ಜಿಲ್ಲಾ ಖಾಸಗೀ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ

ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ರೂಪ್ಸಾ ಕರ್ನಾಟಕ ರಾಜ್ಯಾಧ್ಯಕ್ಷರು ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆಯವರಿಗೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಬೆಂಬಲಿಸಲು ತೀರ್ಮಾನಿಸಲಾಗಿದೆ ಎಂದು ಕೋಲಾರ ಜಿಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಅಧ್ಯಕ್ಷ ಮುನಿಯಪ್ಪ ತಿಳಿಸಿದರು. ಅವರು ಕೋಲಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಸ್ತುತ ಸರ್ಕಾರ ಸೇರಿದಂತೆ ನಮ್ಮ ನಾಡಿದ ಹಲವಾರು ಸರ್ಕಾರಗಳು ಹಾಗೂ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ ವಿಧಾನ ಪರಿಷತ್ ಸದಸ್ಯರುಗಳು ಶಿಕ್ಷಣ ವ್ಯವಸ್ಥೆಯನ್ನು ಕಡೆಗಣಿಸಿ ಹಾಗೂ ಶಿಕ್ಷಕರಿಗೆ ಕನಿಷ್ಠ ಮಟ್ಟದ ಸೌಲಭ್ಯ ಒದಗಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ.

 

 

 

 

ಚುನಾಯಿತ ಪ್ರತಿನಿಧಿಗಳು ತಮ್ಮ ಸ್ವಾರ್ಥಕ್ಕಾಗಿ ಲಾಭದ ದುರಾಸೆಯಿಂದ ಖಾಸಗಿ ಬಂಡವಾಳ ಶಾಹಿಗಳಿಗೆ ಶಿಕ್ಷಣವನ್ನು ಮಾರಿಕೊಳ್ಳುವ ಮೂಲಕ ದೇಶದ ಭವಿಷ್ಯದ ಬುನಾದಿಯನ್ನೇ ಅಭದ್ರಗೊಳಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದರ ಮೂಲಕ ಬಂಡವಾಳ ಶಾಹಿಗಳಿಗೆ ಕಾರ್ಪೊರೇಟ್ ಸಂಸ್ಥೆಗಳ ಸ್ಥಾಪನೆಗೆ ದಾರಿ ಮಾಡಿಕೊಡುತ್ತಿದ್ದಾರೆ. ಸಾವಿರಾರು ಶಿಕ್ಷಕ ಹುದ್ದೆ ಖಾಲಿಯಿದ್ದರೂ ತುಂಬುವ ಪ್ರಯತ್ನ ಮಾಡುತ್ತಿಲ್ಲ ಬದಲಾಗಿ ಅರೆಕಾಲಿಕ ಶಿಕ್ಷಕರ ನೇಮಕ ಮಾಡುವ ಮೂಲಕ ಶಿಕ್ಷಕ ವೃತ್ತಿಗೆ ಕಳಂಕ ತರುವ ಕೆಲಸವನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ.

 

 

 

 

ಈ ಬೆಳವಣಿಗೆಗಳ ವಿರುದ್ಧ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗುವ ಯಾವೊಬ್ಬ ವಿಧಾನ ಪರಿಷತ್ ಸದಸ್ಯ ಸಹ ಇದುವರೆಗೂ ಧನಿಯೆತ್ತದೇ ಇರುವುದು ವಿಪರ್ಯಾಸವೇ ಸರಿ. ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಹಾಗೂ ಶಿಕ್ಷಣ ಕ್ಷೇತ್ರದ ಅಭ್ಯುದಯಕ್ಕಾಗಿ ಹೋರಾಟ ನಡೆಸುವ ಸಲುವಾಗಿ ಕಳೆದ ನಾಲ್ಕೈದು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಹೋರಾಟಗಳನ್ನು ಮಾಡುತ್ತಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಅನುದಾನ ರಹಿತ ಶಾಲೆಗಳ ಅಭಿವೃದ್ಧಿಯಕ್ಕೆ ಹಾಗೂ ಶಿಕ್ಷಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಲೋಕೇಶ್ ತಾಳಿಕಟ್ಟೆಯವರಿಗೆ ಸಂಪೂರ್ಣವಾಗಿ ಕೋಲಾರ ಜಿಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟ ಬೆಂಬಲವನ್ನು ಘೋಷಿಸುತ್ತಿದೆ ಎಂದು ತಿಳಿಸಿದರು

Leave a Reply

Your email address will not be published. Required fields are marked *

error: Content is protected !!