ಶಿಕ್ಷಕರ ಉಳಿವಿಗಾಗಿ ವಿಧಾನಪರಿಷತ್‌ ಚುನಾವಣೆ ಸ್ಪರ್ಧೆ ಅನಿವಾರ್ಯ : ಲೋಕೇಶ್ ತಾಳಿಕಟ್ಟೆ

ಶಿಕ್ಷಕರ ಉಳಿವಿನ ಅನಿವಾರ್ಯತೆಯಿಂದಾಗಿ ನಾನು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಹೇಳಿದರು. ಅವರು ತುಮಕೂರು ನಗರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಚುನಾವಣೆಗೆ ಬೆಂಬಲ ಕೋರಿ ಸುದ್ದಿಗಾರರೊಂದಿಗೆ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಇಂದು ಶಿಕ್ಷಕರನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಡಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಸರ್ಕಾರದ ವಿವಿಧ ನೀತಿಗಳಿಂದಾಗಿ ಇಂದು ಸರ್ಕಾರಿ, ಅನುದಾನಿತ, ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ಪರಿಸ್ಥಿತಿ ಅಧೋಗತಿಗೆ ಇಳಿದಿದ್ದು, ಒಂದೆಡೆ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಕಾಲ್ಪನಿಕ ವೇತನ ಹಾಗೂ ಮುಂಬಡ್ತಿ ತಾರತಮ್ಯ, ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ವೇತನ ತಾರತಮ್ಯ ಹಾಗೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ನೀಡದಿರುವುದು, ಇನ್ನೂ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶಿಕ್ಷಕರ ಸೇವಾ ಭದ್ರತೆ ಆರೋಗ್ಯ ವಿಮೆ ವೇತನ ತಾರತಮ್ಯ ಸೇರಿದಂತೆ ಹತ್ತು ಹಲವು ಸಮಸ್ಯೆಗಳು ಇಂದಿಗೂ ಜೀವಂತವಾಗಿದ್ದು ಶಿಕ್ಷಕರನ್ನು ಇನ್ನಿಲ್ಲದಂತೆ ಕಾಡುತ್ತಿವೆ ಎಂದರು.

 

 

 

ಈ ಎಲ್ಲಾ ಸಮಸ್ಯೆಗಳನ್ನು ಹೋಗಲಾಡಿಸದೆ ಇದ್ದಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಸಾಧ್ಯವಾಗುವುದಿಲ್ಲ ಶಿಕ್ಷಕರು ಈ ದೇಶದ ನಿರ್ಮಾತೃಗಳು ಅವರಿಗೆ ಸರಿಯಾದ ರೀತಿ ಸೌಲಭ್ಯ ನೀಡದೆ ಸರ್ಕಾರ ತನ್ನ ಜವಾಬ್ದಾರಿಯಿಂದ ನೋಡಿಸಿಕೊಳ್ಳಲು ಯತ್ನಿಸುತ್ತಿರುವುದು ಪ್ರಶ್ನಾರ್ಹವಾಗಿದೆ. ಶಿಕ್ಷಕರಿಂದ ಮತ ಪಡೆದು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ವ್ಯಕ್ತಿಗಳು ಹೊಂದಾಣಿಕೆ ರಾಜಕಾರಣ ಮತ್ತು ಪಕ್ಷ ರಾಜಕಾರಣ ಮಾಡಿಕೊಳ್ಳುತ್ತಾ ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸುವ ವಿಫಲರಾಗುತ್ತಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ರಾಜಕಾರಣಿಗಳು ಬಂದು ಸ್ಪರ್ಧಿಸುತ್ತಿರುವುದು ವಿಪರ್ಯಾಸವಾಗಿದ್ದು ಕೇವಲ ರಾಜಕೀಯ ಪುನರ್ವಸತಿ ಕೇಂದ್ರಗಳಂತೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಾಗಿವೆ. ಈ ನಿಟ್ಟಿನಲ್ಲಿ ಶಿಕ್ಷಕರ ಉಳಿವಿನ ಪ್ರಶ್ನೆ ಎದುರಾದ ಕಾರಣ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ನನ್ನನ್ನು ಸ್ಪರ್ಧೆ ಮಾಡುವಂತೆ ಪ್ರೇರೇಪಿಸಿ ಅವರವರೆ ಸಂಘಟನೆ ಮಾಡುತ್ತಾ ನನಗೆ ಬೆಂಬಲಿಸಿದ್ದರಿಂದ ನಾನು ಈ ಚುನಾವಣೆಯಲ್ಲಿ ಅನಿವಾರ್ಯವಾಗಿ ಸ್ಪರ್ಧಿಸುತ್ತಿದ್ದೇನೆ. ಶಿಕ್ಷಣ ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸಗಳು ಬಹಳಷ್ಟು ಇದ್ದು ನೆರೆಯ ಆಂಧ್ರಪ್ರದೇಶ ತಮಿಳುನಾಡು ಹಾಗೂ ಮಹಾರಾಷ್ಟ್ರಗಳಲ್ಲಿ ಶಿಕ್ಷಣ ವ್ಯವಸ್ಥೆ ಉತ್ತಮವಾಗಿದ್ದು, ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳು ಮಾತ್ರ ಸ್ಪರ್ಧಿಸಿ ಆಯ್ಕೆಯಾಗುತ್ತಿರುವುದರಿಂದ ಋಣಾತ್ಮಕ ಶಿಕ್ಷಣ ಪ್ರಕ್ರಿಯೆ ನಡೆಯಲು ಸಾಧ್ಯವಾಗುತ್ತಿದೆಂದು ತಿಳಿಸಿದರು.

 

 

 

ಈ ಬಾರಿಯ ಚುನಾವಣೆಯಲ್ಲಿ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸದಸ್ಯರುಗಳಲ್ಲಿ ಅರಿವು ಮೂಡಿದ್ದು ಚುನಾವಣೆಯಲ್ಲಿ ನನ್ನ ಜಯ ನೂರಕ್ಕೆ ನೂರರಷ್ಟು ಸತ್ಯ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ನಾಗಪ್ಪ ಉಪನ್ಯಾಸಕರ ಸಂಘದ ಮುಖಂಡರಾದ ಗೋವಿಂದರಾಜು ತುಮಕೂರು ಜಿಲ್ಲಾ ಖಾಸಗಿ ಅನುದಾನ ರೈತ ಶಾಲೆಗಳ ಶಿಕ್ಷಕರ ಸಂಘದ ಅಧ್ಯಕ್ಷ ಭೂತರಾಜು ಯುವ ಮುಖಂಡರಾದ ಕೆಂಪರಾಜು ಪ್ರವೀಣ್ ಕುಮಾರ್ ಅಣ್ಣ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!