ರಾಜ್ಯಗಳಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ತುಂಬುವಲ್ಲಿ ಸರ್ಕಾರ ನಿರ್ಲಕ್ಷ ಧೋರಣೆ ತೋರಿಸು ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಫಲವಾಗಿದೆ ಎಂದು ರೂಪ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಆರೋಪಿಸಿದರು
ಅವರು ತುಮಕೂರು ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಉಪನ್ಯಾಸಕರೊಂದಿಗೆ ಸಂವಾದ ಸಭೆಗಳನ್ನು ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ 9 ವರ್ಷಗಳಿಂದ ರಾಜದಾದ್ಯಂತ ಖಾಲಿ ಇರುವ 7,000ಕ್ಕೂ ಹೆಚ್ಚು ಅನುದಾನಿತ ಶಾಲಾ ಶಿಕ್ಷಕರ ಹುದ್ದೆ ನೇಮಕವಾಗಿಲ್ಲ, ಹೇಗಿದ್ದಾಗ ಗುಣಾತ್ಮಕ ಶಿಕ್ಷಣ ನೀಡಲು ಹೇಗೆ ಸಾಧ್ಯ ಹಾಗೂ ಮಕ್ಕಳ ಕನಿಷ್ಠ ಸಂಖ್ಯೆ ನಿಯಮದಡಿಯಲ್ಲಿ ಅನುದಾನಿತ ಶಾಲೆಗಳನ್ನು ಮುಚ್ಚುವ ಹುನ್ನಾರವನ್ನು ಸಹ ಸರ್ಕಾರ ಮಾಡುತ್ತಿದೆ ಸರ್ಕಾರ ಮೂಲಭೂತ ಹಕ್ಕಾದ ಶಿಕ್ಷಣವನ್ನು ನೀಡುವಲ್ಲಿ ಅಗತ್ಯ ಕ್ರಮ ವಹಿಸಬೇಕೆಂದರು.
ಹಿಂದಿನಿಂದ ಎಲ್ಲ ಸರ್ಕಾರಗಳು ಸಹ ಇದೇ ನೀತಿಯನ್ನು ಅನುಸರಿಸುತ್ತಾ ಬಂದಿದ್ದು ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಇಂದು ಗುಣಮಟ್ಟ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೇಗಿದ್ದರೂ ಸಹ ಶಿಕ್ಷಕರ ನೇಮಕಾತಿ ಮಾಡಿಕೊಳ್ಳದೆ ಇರುವುದು ದುರ್ಯೋಧ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದರು.
ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿ ಮಾಡುವ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ಆದೇಶ ನೀಡಿದ್ದರು ಇನ್ನೂ ಸರ್ಕಾರ ಮೀನ ಮೇಷ ಎಣಿಸುತ್ತಿರುವುದು ಯಾವ ಉದ್ದೇಶಕ್ಕೆ ಬದಲು ತಿಳಿದು ಬರುತ್ತಿಲ್ಲ. ಜೊತೆಗೆ ಖಾಸಗಿ ಅನುದಾನ ರಹಿತ ಶಾಲೆಗಳನ್ನು ಸಹ ಮುಚ್ಚುವ ಕರಾಳ ಕಾನೂನನ್ನು ಸರ್ಕಾರ ತರಲು ಹೊರಟಿದ್ದು ಒಟ್ಟಾರೆ ಶಿಕ್ಷಣ ವ್ಯವಸ್ಥೆ ಆದೋಗತಿಗೆ ಹೋಗುತ್ತಿರುವುದು ಜಗಜ್ಜಾಹಿರಾಗಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದರು