ತುಮಕೂರು ಗೆದ್ದಲಹಳ್ಳಿಯ ಮಹಿಳಾ ಹಾಸ್ಟಲ್ ಪ್ರಕರಣದ ತನಿಖೆ ಸಂಬಂಧ ಫೆಬ್ರವರಿ 1 ರಂದು ಮಕ್ಕಳ ಹಕ್ಕುಗಳ ಆಯೋಗ ಆಗಮಿಸಲಿದೆ!!

ತುಮಕೂರು: ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಅಂದರೆ ನವೆಂಬರ್ ತಿಂಗಳಿನಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ತುಮಕೂರು ನಗರದ ಹೊರ ವಲಯದ ಗೆದ್ದಲಹಳ್ಳಿಯಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲೆಯ ಪ್ರಮುಖ ಅಧಿಕಾರಿಗಳು ದೀಪಾವಳಿ ಹಬ್ಬದ ನೆಪದಲ್ಲಿ ನೃತ್ಯ ಮಾಡಿದ್ದಾರೆ ಎನ್ನಲಾದ ಪ್ರಕರಣ ಕುರಿತು ತನಿಖೆ ನಡೆಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ.

 

 

 

 

ಈ ಪ್ರಕರಣ ತನಿಖೆಯನ್ನು ನಡೆಸಲು ಹೆಚ್‌.ಸಿ.ರಾಘವೇಂದ್ರ, ಅಂಜಲಿ ರಾಮಣ್ಣ, ಸಿ.ವಿ.ತಿರುಮಲ ರಾವ್ ಒಳಗೊಂಡ ಮೂವರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ಈಗಾಗಲೇ  ರಚಿಸಲಾಗಿದ್ದು, ಫೆ. 1ರಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11.00 ಗಂಟೆಗೆ ತನಿಖೆಗೆ ಸಮಯ ನಿಗದಿಪಡಿಸಲಾಗಿದೆ ಎಂದು ಹೇಳಲಾಗಿದೆ.

 

 

 

 

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮಹಿಳಾ ಹಾಸ್ಟೆಲ್‌ನಲ್ಲಿ ದೀಪಾವಳಿ ಆಚರಣೆ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಂದು ಹಮ್ಮಿಕೊಳ್ಳಲಾಗಿತ್ತು. ಈ ಹಿಂದಿನ ತುಮಕೂರು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌, ತಹಶೀಲ್ದಾರ್ ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಇತರ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂರ್ಭದಲ್ಲಿ ಕೆಲವು ಅಧಿಕಾರಿಗಳು ಬಾಲಕಿಯರ ಜೊತೆಗೆ ನೃತ್ಯ ಮಾಡಿ, ವಿದ್ಯಾರ್ಥಿನಿಯರ ಜತೆ ಸಭ್ಯತೆ ಮೀರಿ ನಡೆದುಕೊಂಡಿದ್ದರು ಎಂಬ ಗಂಭೀರ ಆರೋಪ ಸಹ ಕೇಳಿಬಂದಿತ್ತು. ಅಧಿಕಾರಿಗಳು ನೃತ್ಯ ಮಾಡಿದ್ದಾರೆ ಎನ್ನಲಾದ ವಿಡಿಯೋಗಳು ಸಹ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ್ದವು.

 

 

ವಿಡಿಯೋ ಹರಿದಾಡಿದ ನಂತರ ಸಾರ್ವಜನಿಕ ವಲಯದಿಂದ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದವು. ಸಾಮಾಜಿಕ ಜಾಲ ತಾಣದಲ್ಲಿ ಪರ-ವಿರೋಧ ಚರ್ಚೆಗಳು ನಡೆದಿದ್ದವು, ಜೊತೆಗೆ ತುಮಕೂರಿನ ಮಾದ್ಯಮ ಲೋಕದಲ್ಲಿಯೂ ಸಹ ಈ ಕುರಿತು ಹಲವಾರು ಚರ್ಚೆ ವಿವಾಧಗಳು ಸಹ ಭುಗಿಲೆದಿದ್ದವು, ಅಂದು ನೃತ್ಯ ಮಾಡಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರರು ತುಮಕೂರು ಜಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆದರೆ ಪ್ರಕರಣ ದಾಖಲಾಗಿರಲಿಲ್ಲ ಎಂಬ ಆರೋಪಗಳು ಸಹ ಕೇಳಿಬಂದಿದ್ದವು.

 

ಆದರೆ ಆ ಹೋರಾಟಗಾರರ ವಿರುದ್ಧವೇ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ದಿನೇಶ್ ಅವರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಭೂಮಿ ಮತ್ತು ವಸತಿ ಹೋರಾಟ ಸಮಿತಿ ಸಂಚಾಲಕ ಹಂದ್ರಾಳ್ ನಾಗಭೂಷಣ್‌ ವಿರುದ್ಧ ಪ್ರಕರಣ ಸಹ ದಾಖಲಾಗಿತ್ತು. ‘ಹಾಸ್ಟೆಲ್‌ ವಿದ್ಯಾರ್ಥಿನಿಯರ ಆತ್ಮಗೌರವಕ್ಕೆ ಧಕ್ಕೆ ಉಂಟು ಮಾಡುವಂತಹ ರೀತಿಯಲ್ಲಿ ಹೇಳಿಕೆ ನೀಡಿ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟಿದ್ದಾರೆ’ ಎಂದು ಸಹ ದೂರಿನಲ್ಲಿ ಆರೋಪಿಸಿದ್ದರು.

 

ಆದರೆ ಸತ್ಯಕ್ಕೆ ಜಯ ಎಂಬ ಮಾತು ಸುಳ್ಳಲ್ಲ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿಯಾಗಿದೆ

 

ಏಕೆಂದರೆ ಅಂದು ಸಂಜೆ ಅಧಿಕಾರಿಗಳು ಹಾಸ್ಟಲ್ ವಿದ್ಯಾರ್ಥಿನಿಯರ ಜೊತೆ ನೃತ್ಯ ಮಾಡಿದ್ದಂತೂ ಸತ್ಯ; ಪ್ರಕರಣ ತಡವಾಗಿ ಬೆಳಕಿಗೆ ಬಂದರೂ ಸತ್ಯವನ್ನು ಮರೆಮಾಚಲು ಯಾರಿಗೂ ಸಾಧ್ಯವಿಲ್ಲವೆಂಬುದು ಪ್ರಬುದ್ಧರ ವಾದವಾಗಿದೆ, ಕೊನೆಗೂ ಈ ಪ್ರಕರಣ ತನಿಖೆಗೆ ಬಂದಿದ್ದು, ಪ್ರಾಮಾಣಿಕ ತನಿಖೆಯಾದಲ್ಲಿ ತಪ್ಪಿತಸ್ಥರ ತಲೆದಂಡ ಕಟ್ಟಿಟ್ಟ ಬುತ್ತಿ !!!!!

Leave a Reply

Your email address will not be published. Required fields are marked *

error: Content is protected !!