ಶಿರಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿ ಆವರಣದಲ್ಲಿಂದು ಮತದಾರ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವರು ವಿದ್ಯುಕ್ತವಾಗಿ ಚಾಲನೆ ನೀಡಿದರು.
ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ ಕಲಾ ತಂಡಗಳ ಮೂಲಕ ಜಾಗೃತಿ ಜಾಥಾವು ತಾಲ್ಲೂಕು ಪಂಚಾಯಿತಿ ಕಛೇರಿಯಿಂದ ಹೊರಟು ಐ.ಬಿ.ಸರ್ಕಲ್ ಮೂಲಕ ಶಿರಾ ಬಸ್ ನಿಲ್ದಾಣದ ಕಡೆ ಸಾಗಿತು.
ನಮ್ಮ ಮತ ನಮ್ಮ ಹಕ್ಕು, ಕಡ್ಡಾಯವಾಗಿ ಮತದಾನ ಮಾಡಿ, ಮತದಾನ ಪರ್ವ ದೇಶದ ಗರ್ವ ಎಂಬ ಘೋಷಣೆಗಳು ವಿದ್ಯಾರ್ಥಿಗಳಿಂದ ಮೊಳಗಿದವು.
ಈ ವೇಳೆ ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಶಾಲಾ ಮಕ್ಕಳು ಜಾಥಾದಲ್ಲಿ ಭಾಗಿಯಾಗಿದ್ದರು.