ತುಮಕೂರು : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ 133ನೇ ಜನ್ಮ ಜಯಂತಿಯನ್ನು ಆಚರಿಲಾಯಿತು.
ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ, ಭಾರತ ದೇಶಕ್ಕೆ ಅಂಬೇಡ್ಕರ್ ರವರು ನೀಡಿದ ಕೊಡುಗೆಯನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು. ಶತಮಾನಗಳ ಕಾಲ ಶಾಶ್ವತವಾಗಿ ಉಳಿಯುವಂತ ಸಂವಿಧಾನ ನಮ್ಮದಾಗಿದೆ. ಪ್ರತಿಯೊಬ್ಬರೂ ಅಂಬೇಡ್ಕರ್ ರವರ ಸಿದ್ದಾಂತಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಬಡತನದಲ್ಲಿ ಹುಟ್ಟಿ ಪ್ರಪಂಚವೇ ತಿರುಗಿ ನೋಡುವಂತೆ, ದೇಶವೇ ಹೆಮ್ಮೆ ಪಡುವಂತೆ ಎತ್ತರಕ್ಕೆ ಬೆಳೆದವರು ಅಂಬೇಡ್ಕರ್. ಇವರು ನೀಡಿರುವ ಸಂವಿಧಾನದಿಂದಲೇ ದೇಶವು ಇಂದಿದೂ ಸುಭೀಕ್ಷವಾಗಿ, ನ್ಯಾಯಯುತವಾಗಿ ಸಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.