ಮಕ್ಕಳ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾದ ತುಮಕೂರು ಜಿಲ್ಲಾ ಪೊಲೀಸ್

ತುಮಕೂರು _ ಇತ್ತೀಚಿಗೆ ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ದಾಖಲಾಗಿದ್ದ 11 ತಿಂಗಳ ಮಗು ಅಪಹರಣ ಪ್ರಕರಣ ಬೆನ್ನು ಹತ್ತಿದ ಪೊಲೀಸರು ತನಿಖೆ ಚುರುಕುಗೊಳಿಸಿದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಏಳು ಆರೋಪಿಗಳನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

 

 

 

 

 

 

ಘಟನೆಯ ಬಗ್ಗೆ ಮಾಹಿತಿ ನೀಡಿರುವ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವಿ ರವರು ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಪ್ರಕರಣ ದಾಖಲಾಗಿದ್ದ ಕೂಡಲೇ ವಿಶೇಷ ತನಿಖಾ ತಂಡವನ್ನು ನೇಮಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಮಾಹಿತಿ ತಿಳಿಸಿದ್ದು.

 

ಪ್ರಕರಣದ ಪ್ರಮುಖ ಆರೋಪಿಗಳಾದ ತುಮಕೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹೇಶ್, ಚಿಕ್ಕನಾಯಕನಹಳ್ಳಿ ತಾಲೂಕಿನ ಮೆಹಬೂಬ್ ಶರೀಫ್, ಗುಬ್ಬಿ ತಾಲೂಕಿನ ಬಿಕ್ಕೆ ಗುಡ್ಡದ ರಾಮಕೃಷ್ಣಪ್ಪ, ತುಮಕೂರಿನ ಭಾರತಿ ನಗರದ ಹನುಮಂತರಾಜು, ನಾಗಮಂಗಲ ತಾಲೂಕಿನ ಮುಬಾರಕ್ ಪಾಷ, ಮಧುಗಿರಿ ತಾಲೂಕಿನ ಬಡವನಹಳ್ಳಿಯ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೂರ್ಣಿಮಾ, ಸಿರಾ ಜ್ಯೋತಿ ನಗರದ ಖಾಸಗಿ ಆಸ್ಪತ್ರೆಯ ಸ್ಟಾಫ್ ಟನರ್ಸ್ ಸೌಜನ್ಯ ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ ಏಳು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ .

 

 

 

ಇನ್ನು ಪ್ರಕರಣದ ಬಂಧಿತ ಆರೋಪಿಗಳು ಅಂತರ್ ಜಿಲ್ಲ ಮಟ್ಟದಲ್ಲಿ ಮಕ್ಕಳನ್ನ ಮಾರಾಟ ಮಾಡುವ ಬೃಹತ್ ಜಾಲವನ್ನು ಹೊಂದಿದ್ದು ಅಪಹರಿಸಲಾದ ಮಕ್ಕಳನ್ನು ಮೂರರಿಂದ ನಾಲ್ಕು ಲಕ್ಷ ರೂಗಳಿಗೆ ಮಾರಾಟ ಮಾಡುತ್ತಿದ್ದರು ಎನ್ನುವ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟರು. ಇನ್ನು ಪತ್ತೆ ಮಾಡಿರುವ 9 ಮಕ್ಕಳ ಪೈಕಿ 5 ಮಕ್ಕಳ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇನ್ನು ಪ್ರಕರಣದ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಪಡೆಯುವ ಹಿನ್ನೆಲೆಯಲ್ಲಿ ತನಿಕೆಯನ್ನ ಚುರುಕುಗೊಳಿಸಲಾಗಿದೆ ಎಂದು ತಿಳಿಸಿದರು.

 

 

 

ಇನ್ನು ಪ್ರಕರಣದ ಪ್ರಮುಖ ಆರೋಪಿ ಮಹೇಶ್ ಅವಿವಾಹಿತ ಗರ್ಭ ಧರಿಸಿದ ಮಹಿಳೆಯರನ್ನ ಹಾಗೂ ಅಕ್ರಮ ಸಂಬಂಧದಿಂದ ಗರ್ಭ ಧರಿಸಿರಿದವರನ್ನ ಪತ್ತೆ ಮಾಡಿ ಅವರುಗಳಿಂದ ಮಕ್ಕಳನ್ನು ಪಡೆದುಕೊಂಡು ಮಕ್ಕಳು ಇಲ್ಲದ ದಂಪತಿಗಳಿಗೆ ಹೆಚ್ಚಿನ ಹಣ ಪಡೆದು ಮಾರಾಟ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.

 

ಇನ್ನು ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿ ಹುಳಿಯಾರಿನ ಮೆಹಬೂಬ್ ಶರೀಫ್ ಈತನು ಸಹ ಹುಳಿಯಾರಿನಲ್ಲಿ ತನ್ನ ಹೆಂಡತಿಯ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಯನ್ನು ನಡೆಸುತ್ತಿರುವುದಾಗಿ ತಿಳಿಸಿದ್ದು ಪ್ರಕರಣದ ಆರೋಪಿ ಶರೀಫ್ ನೀಡಿದ ಮಾಹಿತಿಯನ್ನು ಆಧರಿಸಿ ಆರೋಪಿಗಳು ಮಾರಾಟ ಮಾಡಿದ್ದ ಒಂಬತ್ತು ಮಕ್ಕಳ ಪೈಕಿ ಐದು ಮಕ್ಕಳನ್ನು ರಕ್ಷಿಸಿದ್ದು ಒಂದು ಮಗು ಮೃತಪಟ್ಟಿದ್ದು ಇನ್ನೊಂದು ಮಗುವನ್ನ ಪೋಷಕರಿಗೆ ಹಿಂದಿರುಗಿಸಿರುತ್ತಾರೆ ಇದರ ಜೊತೆಗೆ ಸಂರಕ್ಷಿಸಿರುವ 5 ಮಕ್ಕಳ ಪೈಕಿ ಒಂದು ಮಗುವನ್ನು ಪೋಷಕರಿಗೆ ನೀಡಿದ್ದು ನಾಲ್ಕು ಮಕ್ಕಳುಗಳನ್ನು ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೇರೆಗೆ ದತ್ತು ಸ್ವೀಕಾರ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ತಿಳಿಸಿದರು.

 

 

ಇನ್ನು ಇದೇ ವೇಳೆ ಪ್ರಕರಣದಲ್ಲಿ ಬಳಸಲಾಗಿದ್ದ ಮಾರುತಿ 800 ಕಾರು 50,000 ನಗದು ಹಾಗೂ ನಾಲ್ಕು ಮೊಬೈಲ್ ಫೋನುಗಳನ್ನು ಅಮಾನತ್ತು ಮಾಡಿಕೊಂಡಿದ್ದು.

ಇದೇ ಸಂದರ್ಭದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದ ಅಶೋಕ್ ಕೆ ವಿ ರವರು ತನಿಖಾ ತಂಡದ ನೇತೃತ್ವ ವಹಿಸಿದ್ದ ಅಪಾರ ಪೊಲೀಸ್ ಅಧೀಕ್ಷಕರುಗಳಾದ ವಿ ಮರಿಯಪ್ಪ ಮತ್ತು ಅಬ್ದುಲ್ ಖಾದರ್ ಹಾಗೂ ಸಿರಾ ಉಪ ವಿಭಾಗದ ಡಿವೈಎಸ್ಪಿ ಬಿ.ಕೆ ಶೇಖರ್, ಗುಬ್ಬಿ ವೃತ್ತದ ಸಿಪಿಐ ಗೋಪಿನಾಥ್, ಗುಬ್ಬಿ ಪೊಲೀಸ್ ಠಾಣೆಯ ಪಿಎಸ್ಐ ಸುನಿಲ್ ಕುಮಾರ್ ಸಿಬ್ಬಂದಿಗಳಾದ ನವೀನ್ ಕುಮಾರ್, ವಿಜಯ್ ಕುಮಾರ್, ಮಧುಸೂದನ್ ರವರನ್ನು ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ನರಸಿಂಹರಾಜು ಹಾಗೂ ದುಶಾಂತ್ ರವರನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!