ಮಧುಗಿರಿ : ವಾರದಲ್ಲಿ ಎರಡು-ಮೂರು ದಿನ ಮೊದಲ ತರಗತಿ ತಪ್ಪಿಸಿಕೊಳ್ಳುವ ವಿದ್ಯಾರ್ಥಿಗಳು. ಹೆದ್ದಾರಿಗಳಲ್ಲಿ ಜೀವ ಕೈಯಲ್ಲಿ ಹಿಡಿದು ನಿಲ್ಲುವ ಸ್ಥಿತಿ. ಮಳೆಗಾಲದಲ್ಲಿ ಸಂಕಷ್ಟ ಹೆಚ್ಚು.. ಇವು ತಾಲೂಕಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಗೋಳು.
ಬೆಳಗಿನ ವೇಳೆಯಲ್ಲಿ ಶಾಲೆ-ಕಾಲೇಜುಗಳಿಗೆ ಬರಲು ಅನುಕೂಲವಾಗುವಂತೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲದೆ ತಾಲೂಕಿನಿಂದ ಜಿಲ್ಲೆಗೆ ಹೋಗುವ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮೀಣ ಭಾಗಗಳಿಂದ ನಿತ್ಯ ಸಾವಿರಾರು ವಿದ್ಯಾರ್ಥಿಗಳು ನಗರದ ಶಾಲಾ-ಕಾಲೇಜುಗಳಿಗೆ ಬರುತ್ತಾರೆ. ಆದರೆ ಸಮರ್ಪಕ ಬಸ್ ಸೌಲಭ್ಯ ಇಲ್ಲದ ಕಾರಣ ಪರದಾಡುವಂತಾಗಿದೆ.
ಮಧುಗಿರಿ ಬಸ್ ಡಿಪೋ ಅಧಿಕಾರಿಗಳು ಗಮನ ಹರಿಸಬೇಕು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸಮಯ ಬೆಳಗ್ಗೆ 6 15, ಹಾಗೂ 6:30ಕ್ಕೆ ಬಂದರೆ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ